ರೆಡಿಯಂ ಅಂಗಡಿಗೆ ಬೆಂಕಿ. ಲಕ್ಷಾಂತರ ರೂ ಹಾನಿ…

0
98

ಬೀದರ್/ಬಸವಕಲ್ಯಾಣ: ರೆಡಿಯಂ ಅಂಗಡಿಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ, ಲಕ್ಷಾಂತರ ರೂ. ವಸ್ತುಗಳು ಬೆಂಕಿಗೆ ಆಹುತಿಯಾದ ಘಟನೆ ನಗರದ ಟೂರಿಸ್ಟ ಲಾಡ್ಜ್ ಬಳಿ ಬುಧವಾರ ರಾತ್ರಿ ನಡೆದಿದೆ.

ಮಸ್ತಾನ ಆರ್ಟ್ಸ್ ಎನ್ನುವ ಅಂಗಡಿಗೆ ಬೆಂಕಿ ತಗುಲಿದ್ದು, ಅಂಗಡಿಯಲ್ಲಿದ್ದ ಕಂಪ್ಯೂಟರ್ ಹಾಗೂ ಇತರ ಯಂತ್ರಗಳು ಸೇರಿದಂತೆ ಎಲ್ಲಾ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ವಿಧ್ಯುತ್ ಶಾರ್ಟ್ ಸರ್ಕ್ಯುಟನಿಂದ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ.

ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ತಂಡ ಬೆಂಕಿ ನಂದಿಸಿದೆ.
ಬೆಂಕಿಯಿಂದ ಸುಮಾರು 4 ಲಕ್ಷಕ್ಕೂ ಅಧಿಕ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.
ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿನೀಡಿ ಪರಿಶೀಲಿಸಿದಾರೆ.

LEAVE A REPLY

Please enter your comment!
Please enter your name here