ರೈತರ,ಸಹಕಾರಿ ಸಂಘಗಳ ಸಾಲ ಮನ್ನಕ್ಕೆ ಒತ್ತಾಯ

0
130

ಬೆಂಗಳೂರು/ಕೆ.ಆರ್.ಪುರ; ರಾಜ್ಯದ ರೈತರ ಸಹಕಾರಿ ಸಂಘಗಳ ಸಾಲ ಮನ್ನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಗ್ರಹ.

ರಾಜ್ಯದ ರೈತರು ಸಹಕಾರಿ ಸಂಘಗಳ ಮೂಲಕ ಪಡೆದಿರುವ ಸಾಲವನ್ನು ರಾಜ್ಯ ಸರಕಾರ ಮನ್ನಾ ಮಾಡುವಂತೆ ಒತ್ತಡ ಹೇರಲು ಜು.10ರಂದು ಬೆಂಗಳೂರಿನಲ್ಲಿ ರೈತರ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸದರು.
ಕೆ.ಆರ್.ಪುರದ ಕೆ.ಆರ್.ಇನ್ ಹೊಟೇಲ್ನಲ್ಲಿ ಆಯೋಜಿಸಲಾಗಿದ್ದ ಬೆಂಗಳೂರು ನಗರ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿ ಮಾತನಾಡಿದ ಅವರು, ಸುಮಾರು 4-5 ಲಕ್ಷ ರೈತರು ಪಾಲ್ಗೊಳ್ಳಲಿರುವ ಬೃಹತ್ ಸಮಾವೇಶ ಇದಾಗಲಿದೆ. ಉತ್ತರಪ್ರದೇಶದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಮೂರೆ ದಿನಗಳಲ್ಲಿ ಕೇಂದ್ರದ ನೆರವು ಇಲ್ಲದೆ ರೈತರ 1 ಲಕ್ಷ ರೂ.ವರೆಗಿನ ಸಾಲವನ್ನು ಮನ್ನಾ ಮಾಡಲಾಗಿದೆ ಎಂದರು.

ರಾಜ್ಯದಲ್ಲಿ ನಾನು ಬರ ಅಧ್ಯಯನ ಪ್ರವಾಸ ಕೈಗೊಂಡಿದ್ದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಆದರೆ, ನಾನು ಪ್ರವಾಸ ಕೈಗೊಂಡಿರುವ 12 ಜಿಲ್ಲೆಗಳಲ್ಲಿ ಎಲ್ಲಿಯೂ ಮಳೆ ಬಂದಿಲ್ಲ. ಯಾವ ಜಲಾಶಯವು ಭತರ್ಿಯಾಗಿಲ್ಲ. ಈ ಪುಣ್ಯಾತ್ಮ ಅಧಿಕಾರಕ್ಕೆ ಬಂದ ದಿನದಿಂದ ರಾಜ್ಯಕ್ಕೆ ಇಂತಹ ದಿನಗಳು ಬಂದಿವೆ ಎಂದು ಯಡಿಯೂರಪ್ಪ ಟೀಕಿಸಿದರು.

ನರೇಂದ್ರಮೋದಿ ಹಾಗೂ ಯಡಿಯೂರಪ್ಪ ನಾಯಕತ್ವದಲ್ಲಿ ರಾಜ್ಯದಲ್ಲಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ ಎಂದು ಅವರು ತಿಳಿಸಿದರು.

ನವೆಂಬರ್ನಲ್ಲಿ ಗುಜರಾತ್, ಡಿಸೆಂಬರ್ನಲ್ಲಿ ಹಿಮಾಚಲಪ್ರದೇಶ ಹಾಗೂ ಮುಂದಿನ ವರ್ಷದ ಮಾಚರ್್ ಅಥವಾ ಎಪ್ರಿಲ್ನಲ್ಲಿ ಕನರ್ಾಟಕದ ಚುನಾವಣೆ ನಡೆಯಲಿದ್ದು, ಈ ಮೂರು ರಾಜ್ಯಗಳಲ್ಲಿಬಿಜೆಪಿ ಗೆಲುವು ಸಾಧಿಸಲಿದೆ. ಈಗ ದೇಶದ 15 ರಾಜ್ಯಗಳಲ್ಲಿ ಬಿಜೆಪಿ ಆಡಳಿತದಲ್ಲಿದೆ. ಈ ಮೂರು ರಾಜ್ಯಗಳ ಚುನಾವಣೆ ನಂತರ 18 ರಾಜ್ಯಗಳಲ್ಲಿ ನಮ್ಮ ಅಧಿಕಾರವಿರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕುಚರ್ಿಯನ್ನು ಭದ್ರಪಡಿಸಿಕೊಳ್ಳಲು ತಂತ್ರ, ಕುತಂತ್ರ ನಡೆಸುವ ಸಾಧ್ಯತೆಗಳಿವೆ. ರಾಜ್ಯದಲ್ಲಿ ಯಾವ ಸಂದರ್ಭದಲ್ಲಿ ಚುನಾವಣೆ ನಡೆದರೂ ಅದನ್ನು ಎದುರಿಸಲು ಬಿಜೆಪಿ ಸಿದ್ಧವಿದೆ. ರಾಜ್ಯದ 6.50 ಕೋಟಿ ಜನ ಈ ಸರಕಾರದ ದುರಾಡಳಿತದಿಂದ ಬೇಸತ್ತಿದ್ದಾರೆ ಎಂದರು.

ಒಟ್ಟಾರೆ ಚುನಾವಣೆ ಸಮೀಪಿಸುತ್ತಿದ್ದು ಮತದಾರರನ್ನು ಹೆಗೆ ಸೆಳೆಯಬೇಕೆಂಬ ಚಟುವಟಿಕೆಗಳನ್ನು ಈಗಿನಿಂದಲೆ ಆರಂಭಿಸುತ್ತಿದ್ದು ಮುಂದಿನ ಬಾರಿ ಶತಾಯಗತಾಯ ಅಧಿಕಾರದ ಗದ್ದುಗೆ ಏರಲು ಬಿ.ಜೆ.ಪಿ ಸನ್ನದ್ದವಾಗಿದೆ.

LEAVE A REPLY

Please enter your comment!
Please enter your name here