ರೈತರ ಮತ್ತು ಕಟ್ಟಡ ಕಾರ್ಮಿಕರ ಸಮಾವೇಶ..

0
171

ಮಂಡ್ಯ/ಮಳವಳ್ಳಿ:ಕರ್ನಾಟಕ ಪ್ರಾಂತ ರೈತ ಸಂಘ , ಕರ್ನಾಟಕರಾಜ್ಯ ಕಟ್ಟಡ ಮತ್ತುಇತರ ನಿರ್ಮಾಣ ಕಾರ್ಮಿಕರ ಫೆಡರೇಶನ್ ವತಿಯಿಂದ ರೈತರ ಮತ್ತು ಕಟ್ಟಡ ಕಾರ್ಮಿಕರ ಘಟಕ ಸಮಾವೇಶ ಮಳವಳ್ಳಿ ತಾಲ್ಲೂಕಿನ ಚಿಕ್ಕಬಾಗಿಲು ಗ್ರಾಮದಲ್ಲಿ ನಡೆಸಲಾಯಿತು. ಕಾರ್ಯಕ್ರಮ ವನ್ನು ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಎನ್.ಎಲ್ ಭರತ್ ರಾಜ್ ಉದ್ಘಾಟಿಸಿ ಮಾತನಾಡಿ, ರೈತರ ಆತ್ಮಹತ್ಯೆ ಹೆಚ್ಚಾಗುತ್ತಿದೆ. ದೇಶದಲ್ಲಿ 23 ನಿಮಿಷಗಳಲ್ಲಿ ಒಬ್ಬ ರೈತ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ವಿಷಾದ ವ್ಯಕ್ತ ಪಡಿಸಿದರು. ರಾಜಕಾರಣಿಗಳು ಅದಿಕಾರದಾಸೆಗೆ ಜನರನ್ನು ಮರುಳು ಮಾಡುತ್ತಿದ್ದಾರೆ. ರೈತರಿಗೆ ನೀಡುವ ಸೌಲಭ್ಯಗಳನ್ನು ಸರ್ಕಾರ ನೀಡುತ್ತಿಲ್ಲ . ರೈತರು ಒಂದಾಗಿ ಹೋರಾಟ ಮಾಡಬೇಕಾಗಿದೆ. ಅದಕ್ಕಾಗಿ ರೈತರು ಸಂಘಟಿತರಾಗಬೇಕು ಎಂದುತಿಳಿಸಿದರು. ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಟ್ಟಮ್ಮಣಿ, ಜಿ.ರಾಮಕೃಷ್ಣ, ಶಾಂಭವಿ, ತಿಮ್ಮೇಗೌಡ,ರಾಜಶೇಖರ, ಸೇರಿದಂತೆ ಮತ್ತಿತ್ತರರು ಇದ್ದರು

LEAVE A REPLY

Please enter your comment!
Please enter your name here