ವಿದ್ಯಾರ್ಥಿಗಳಿಂದ ಸ್ವಚ್ಛತೆಗೆ ಒತ್ತಾಯ

0
93

ಬಳ್ಳಾರಿ /ಹೊಸಪೇಟೆ: ಸ್ಥಳೀಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಸುತ್ತಮುತ್ತಲ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡುವಂತೆ ಒತ್ತಾಯಿಸಿ, ಭಾರತ ವಿದ್ಯಾರ್ಥಿ ಫೆಡರೇಷನ್ ತಾಲೂಕು ಸಮಿತಿ ನೇತೃತ್ವದಲ್ಲಿಂದು ವಿದ್ಯಾರ್ಥಿಗಳು ನಗರಸಭೆ ಕಛೇರಿ ಎದುರು ಪ್ರತಿಭಟನೆ ನಡೆಸಿದರು.
ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಸುತ್ತಮುತ್ತಲ ಪ್ರದೇಶ ಅಸ್ವಚ್ಛತೆಯಿಂದ ಕೂಡಿದ್ದು. ಇದರಿಂದ ಸೊಳ್ಳೆಗಳ ಹಾವಳಿ ಅಧಿಕವಾಗಿದೆ. ಅಲ್ಲದೆ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿರುವುದರಿಂದ ಕಾಲೇಜು ಸುತ್ತಮುತ್ತ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದರು. ನಂತರ ಬೇಡಿಕೆಗಳ ಮನವಿಪತ್ರವನ್ನು ನಗರಸಭೆ ಅಧ್ಯಕ್ಷ ನಾಗಲಕ್ಷ್ಮಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಧರ್ ನಾಯ್ಡು  ರಿಗೆ ಸಲ್ಲಿಸಿದರು. ಮನವಿಪತ್ರ ಸ್ವೀಕರಿಸಿ, ಮಾತನಾಡಿದ ಸ್ಥಾಯಿ ಸಮಿತಿ ಅಧ್ಯಕ್ಷ ಈ ಕುರಿತು ವಿಶೇಷ ಸಭೆ ಜರುಗಿಸಿ, ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ, ತಾಲೂಕು ಕಾರ್ಯದರ್ಶಿ ಭೀಮನಗೌಡ, ಮುಖಂಡರಾದ ಶರಣು,ಮಾರುತಿ, ಗೀತಾಂಜಲಿ ಸೇರಿದಂತೆ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here