ವಿವಿಧ ಬೇಡಿಕೆ ಪೂರೈಸುವಂತೆ ಆಗ್ರಹಿಸಿ ಪ್ರತಿಭಟನೆ.

0
147

ಯಾದಗಿರಿ:ವಾಲ್ಮೀಕಿ ನಾಯಕ ಸಮಾಜದ ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ಆಗ್ರಹಿಸಿ ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಭೀಮರಾಯನಗುಡಿಯ ಹತ್ತಿರ ಹೈದರಾಬಾದ್ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಂಘದಿಂದ ರಸ್ತೆ ತಡೆ ನಡೆಸಲಾಗಿದೆ.

ಶಹಾಪುರ ತಾಲೂಕಿನ ಭೀಮರಾಯನಗುಡಿಯ ಹತ್ತೀರ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿದ ಹೈದರಾಬಾದ್ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಂಘಟನೆಯ ಮುಖಂಡರು ಸುಮಾರು ಒಂದೂವರೆ ಗಂಟೆಗಳ ಕಾಲ ರಸ್ತೆ ರೋಕ್ ನಡೆಸಿದರು‌, ಸಮಾಜದ ಬೇಡಿಕೆಗಳಾದ ಮೀಸಲಾತಿ ಪ್ರಮಾಣ ಹೆಚ್ಚಳ, ನಕಲಿ ಜಾತಿ ಪ್ರಮಾಣ ಪತ್ರಗಳ ಆವಳಿ ತಡೆಗಟ್ಟುವಿಕೆ, ವಾಲ್ಮೀಕಿ ನಾಯಕ ಜನಾಂಗದ ಮೇಲಿನ ದೌರ್ಜನ್ಯ ತಡೆಗಟ್ಟುವಿಕೆ ಸೇರಿದಂತೆ ವಿವಿಧ ಬೇಡಿಕೆಗಳನ್ನೊಳಗೊಂಡಂತೆ ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ಸಹಾಯಕ ಆಯುಕ್ತರ ಮೂಲಕ ಸರ್ಕಾರಕ್ಕೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಯಚೂರಿನ ವಾಲ್ಮೀಕಿ ನಾಯಕ‌ ಸಮಾಜದ ಮುಖಂಡ ರಘುವೀರ ನಾಯಕ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದರು.

ಇನ್ನೂ ಈ ಹೋರಾಟದಲ್ಲಿ ರಾಜ್ಯ ಸರ್ಕಾರದಿಂದ ವಾಲ್ಮೀಕಿ ನಾಯಕ ಜನಾಂಗಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಆಕ್ರೋಶ ವ್ಯಕ್ತಪಡಿಸಲಾಯಿತು, ಹಾಗೂ ವಾಲ್ಮೀಕಿ ನಾಯಕ ಸಮಾಜದ ಸಮಸ್ಯೆಗಳನ್ನು ಪರಿಹರಿಸದಿದ್ದರೆ ಉಗ್ರಹೋರಾಟ ಮಾಡಲಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಸಲಾಯಿತು. ಸುಮಾರು ಒಂದೂವರೆ ಗಂಟೆಗಳ ಕಾಲ ರಸ್ತೆ ಸಂಚಾರ ಸ್ಥಗಿತಗೊಂಡಿದ್ದರಿಂದ ಕಲಬುರಗಿಯಿಂದ ಬೆಂಗಳೂರಿನವರೆಗೂ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯಲ್ಲಿ ಟ್ರಾಪೀಕ್ ಜಾಮ್ ಉಂಟಾಗಿತ್ತು.
ಹೋರಾಟದಲ್ಲಿ ಹಿರಿಯ ಪತ್ರಕರ್ತರಾದ ಭೀಮರಾಯ ಹದ್ದಿನಾಳ,ಗೋಲಪಲ್ಲಿಯ ವಾಲ್ಮೀಕಿ ಆಶ್ರಮದ ವರದಾನಂದೇಶ್ವರ ಸ್ವಾಮೀಜಿ, ರಾಯಚೂರು, ಕಲಬುರಗಿ, ಯಾದಗಿರಿ ಜಿಲ್ಲೆಯ ವಿವಿಧ ಗ್ರಾಮಗಳಿಂದ ಬಂದಿದ್ದ ಸಾವಿರಾರು ಜನ ವಾಲ್ಮೀಕಿ ನಾಯಕ ಸಮಾಜದ ಮುಖಂಡರು, ಯುವಕರು ಸೇರಿದಂತೆ ಅನೇಕರು ಇದ್ದರು..

LEAVE A REPLY

Please enter your comment!
Please enter your name here