ಶಾಸಕ ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ನೀಡಲು ಒತ್ತಾಯ

0
254

ಚಾಮರಾಜನಗರ/ಕೊಳ್ಳೇಗಾಲ:ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ರಾಜ್ಯದ ಏಕೈಕ ಉಪ್ಪಾರ ಸಮುದಾಯದ ಶಾಸಕ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ತಾಲ್ಲೂಕು ಭಗೀರಥ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ನಾಗರಾಜು ಉಪ್ಪಾರ್ ಒತ್ತಾಯಿಸಿದರು.
ಪಟ್ಟಣದ ರಾಘವೇಂದ್ರ ಮಠದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ಉಪ್ಪಾರ ಸಮುದಾಯ 35ರಿಂದ 40ಲಕ್ಷ ಜನಸಂಖ್ಯೆ ಹೊಂದಿದ್ದು ರಾಜ್ಯದ ಇಡೀ 224 ಕ್ಷೇತ್ರಗಳ ಪೈಕಿ ಪುಟ್ಟರಂಗಶೆಟ್ಟಿ ಏಕೈಕ ಉಪ್ಪಾರ ಶಾಸಕರಾಗಿದ್ದಾರೆ. ಅಲ್ಲದೆ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಇವರಿಗೆ ಸಚಿವ ಸ್ಥಾನ ನೀಡಿಬೇಕು. ಜೊತೆಗೆ ಚಾಮರಾಜನಗರ ಜಿಲ್ಲೆಯಲ್ಲಿ ಉಪ್ಪಾರ ಜನಾಂಗ ಅಧಿಕ ಸಂಖ್ಯೆಯಲ್ಲಿ ಇರುವುದರಿಂದ ಪುಟ್ಟರಂಗಶೆಟ್ಟಿ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಬೇಕೆಂದು ವರಿಷ್ಠರಿಗೆ ಒತ್ತಾಯಿಸಿದರು.
ಇದರೊಂದಿಗೆ ಉಪ್ಪಾರ ಸಮುದಾಯವನ್ನು ಎಸ್ಟಿ ಗೆ ಸೇರಿಸಿ ಎಂದು ಹಿಂದಿನಿಂದಲೂ ಹೋರಾಟ ಮಾಡಿಕೊಂಡು ಬಂದಿದ್ದು ಇದುವರೆಗೂ ನಮ್ಮ ಬೇಡಿಕೆ ಈಡೇರಿಲ್ಲ. ಹಾಗಾಗಿ ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರವು ನಮ್ಮ ಸಮುದಾಯವನ್ನು ಎಸ್ಟಿಗೆ ಸೇರಿಸುವ ಮೂಲಕ ನಮ್ಮ ಬೇಡಿಕೆ ಈಡೇರಿಸಬೇಕು ಎಂದು ಮನವಿ ಮಾಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಉಪ್ಪಾರ ಸಮಾಜದ ಮುಖಂಡರಾದ ಕುಂತೂರು ಮೋಳೆ ರಾಜೆಂದ್ರ, ಮೂಳ್ಳೂರು ಸಿದ್ದಶೆಟ್ಟಿ, ಸಿದ್ದಪ್ಪಸ್ವಾಮಿ, ಪುಟ್ಟಸ್ವಾಮಿ, ದೊಡ್ಡ ಯಜಮಾನರಾದ ಮಾದೇಶ್, ವರದರಾಜು, ನಗರಸಭಾ ಮಾಜಿ ಸದಸ್ಯ ಧರಣೇಶ್, ಕುಣಗಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟಶೆಟ್ಟಿ ಇನ್ನಿತರರು
ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here