ಶಿಕ್ಷಕರ ಪ್ರತಿಭಟನೆ(ಗುಡಿಬಂಡೆ)

0
284

ಚಿಕ್ಕಬಳ್ಳಾಪುರ/ಗುಡಿಬಂಡೆ: ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಮಾಡಲಾಯಿತು.

ಈ ವೇಳೆ ಮಾತನಾಡಿದ ಸಂಘದ ಅಧ್ಯಕ್ಷ ಬಾಲಾಜಿ ಕಳೆದ 50 ವರ್ಷಗಳಿಂದ ಮಕ್ಕಳಿಗೆ ಗುಣಾತ್ಮಕ ಶಿಕ್ಷಣವನ್ನು ನೀಡುವಲ್ಲಿ ಶಿಕ್ಷರ ಸೇವೆ ಅಪಾರವಾದುದು. 2004 ರಿಂದ ದೇಶದ ಶಿಕ್ಷಕರಿಗೆ ಹಾಗೂ ನೌಕರರಿಗೆ ಜಾರಿಗೆ ತಂದಿರುವ ಹೊಸ ಪಿಂಚಣಿ ಯೋಜನೆ ಅನ್ನು ರದ್ದುಗೊಳಿಸಬೇಕಿದೆ. ಈ ಕುರಿತು ಸಭಂದಪಟ್ಟವರಿಗೆ ಮನವಿ ಸಹ ಮಾಡಲಾಗಿದೆ. ಆದರೆ ಸರ್ಕಾರ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಲು ಮಿನಾಮೇಷ ಎಣಿಸುತ್ತಿದೆ. ಇದೆ ಅಲ್ಲದೇ ನೌಕರರ ಅನೇಕ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದರು.

ನಂತರ ಸಂಘದ ಉಪಾಧ್ಯಕ್ಷ ವಿ.ಶ್ರೀರಾಮಪ್ಪ ಮಾತನಾಡಿ ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಟನೆಯ ನಿರ್ಧಾರದಂತೆ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈ ತಿಂಗಳ ಅಂತ್ಯದೊಳಗೆ ಈಡೇರಿಸಿದೆ ಇದ್ದಲ್ಲಿ ಹೋರಾಟದ ಯೋಜನೆಯನ್ನು ರೂಪಿಸಿ, ಕೇಂದ್ರ ಮಟ್ಟದಲ್ಲಿ ಹೋರಾಟ ಮಾಡುತ್ತೇವೆ ಎಂದರು.

7ನೇ ವೇತನ ಆಯೋಗದ ಶಿಫಾರಸ್ಸು ಗಳನ್ನು ಎಲ್ಲಾ ರಾಜ್ಯಗಳಲ್ಲಿ ತಕ್ಷಣ ಜಾರಿಗೊಳಿಸುವುದು, ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭ ಮಾಡಿವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಬಿ.ಈ.ಓ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಈ ವೇಳೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ವಿ.ನಾರಾಯಣಸ್ವಾಮಿ, ಪ್ರದಾನ ಕಾರ್ಯದರ್ಶಿ ಮುನಿಕೃಷ್ಣ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಇ.ಎನ್. ಶ್ರೀರಾಮರೆಡ್ಡಿ, ಉಪಾಧ್ಯಕ್ಷ ರಘುರಾಮ್, ಖಾಜಾಂಚಿ ಶೈಲಾಕುಮಾರಿ, ಪದಾಧಿಕಾರಿಗಳಾದ ಪುರುಷೋತ್ತಮ್, ಅಶೋಕ್ ಸೇರಿದಂತೆ ಹಲವರು ಇದ್ದರು.

LEAVE A REPLY

Please enter your comment!
Please enter your name here