ಶಿಕ್ಷಣದ ಜೊತೆಗೆ ಜೀವನದ ಬಗ್ಗೆ ಕಲಿಸಿ

0
184

ಮಂಡ್ಯ/ಮಳವಳ್ಳಿ: ಮಕ್ಕಳಿಗೆ ಒಳ್ಳೆಯ ಶಿಕ್ಷಣದ ಜೊತೆಗೆ ಜೀವನದ ಬಗ್ಗೆ ತಿಳುವಳಿಕೆ ಕಲಿಸಿ ಎಂದು ಶಾಸಕ ಪಿ.ಎಂ ನರೇಂದ್ರ ಸ್ವಾಮಿ ತಿಳಿಸಿದರು.

ಮಳವಳ್ಳಿ ಪಟ್ಟಣದ ಶಾಂತಿ ಸಮುದಾಯ ಭವನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ವತಿಯಿಂದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಾಥಮಿಕ ಹಂತದಲ್ಲಿ ಕಲಿಸಿದ ಗುರುಗಳನ್ನು ತಂದೆ ತಾಯಿಗಳಿಗಿಂತ ಹೆಚ್ಚಾಗಿ ನೆನಪಿನಲ್ಲಿ ಇಟ್ಟುಕೊಳ್ಳುತ್ತಾರೆ ಅದಕ್ಕಾಗಿ ತಮ್ಮ ಶಿಷ್ಯರನ್ನು ಉತ್ತಮ ಗುಣಮಟ್ಟದ ಶಿಕ್ಷಣ ನೀಡಿದರೆ ದೇಶದಲ್ಲೆ ನಿಮಗಿಂತ ದೇವರು ಬೇರಿಲ್ಲ. ಪ್ರತಿಯೊಬ್ಬ ಶಿಕ್ಷಕರು ಶಿಷ್ಯರನ್ನು ದೇಶವನ್ನು ಮುನ್ನಡೆಸುವ ವ್ಯಕ್ತಿಯನ್ನು ಮಾಡಿದ ಕೀರ್ತಿ ನಿಮ್ಮದಾಗಿರಲಿ ಎಂದರು. ಇದೇ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರಿಗೆ. ಉತ್ತಮ ಶಿಕ್ಷಕರಿಗೆ . ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಯಲ್ಲಿ ಹೆಚ್ಚು ಅಂಕ ಪಡೆದ ಶಿಕ್ಷಕರ ಮಕ್ಕಳಿಗೆ ಸನ್ಮಾನಿಸಲಾಯಿತು. ಕಾರ್ಯಕ್ರಮ ದಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಆರ್.ಎನ್ ವಿಶ್ವಾಸ್, ಮಂಡ್ಯ ಉಪನಿರ್ದೇಶಕ ಎಂ ಶಿವಮಾದಪ್ಪ, ಜಿ.ಪಂ ವಿರೋದ ಪಕ್ಷದ ನಾಯಕ ಹನುಮಂತು, ಜಿ.ಪಂ ಸದಸ್ಯರಾದ ಸುಷ್ಮ, ಸುಜಾತಸುಂದ್ರಪ್ಪ, .ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ನಾಗೇಶ್, ಪ್ರಾಥಮಿಕ ಶಾಲಾಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರವಿಶಂಕರ್, ತಾಲ್ಲೂಕು ಆದ್ಯಕ್ಷ ನಾಗೇಶ್, ಸೇರಿದಂತೆ ಮತ್ತಿತ್ತರರು ಇದ್ದರು

LEAVE A REPLY

Please enter your comment!
Please enter your name here