ಶಿಕ್ಷಣಮಟ್ಟವನ್ನು ಹೆಚ್ಚಿಸಬೇಕು..

0
183

ಬೆಂಗಳೂರು/ಮಹದೇವಪುರ:- ಸರ್ಕಾರಿ ಶಾಲೆಯ ಮಕ್ಕಳಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಿ ಅವರ ಶಿಕ್ಷಣಮಟ್ಟವನ್ನು ಹೆಚ್ಚಿಸಬೇಕು ಎಂದು ಕೆಪಿಸಿಸಿ ಕಾರ್ಯದರ್ಶಿ ಎ.ಸಿ ಶ್ರೀನಿವಾಸ್ ತಿಳಿಸಿದರು.

ಕ್ಷೇತ್ರದ ದೊಡ್ಡಬನಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಕಲಿಕಾಸಾಮಗ್ರಿಗಳನ್ನು ವಿತರಿಸಿ ಅವರು ಮಾತನಾಡಿದರು ಸರ್ಕಾರಿ ಶಾಲಾ ಮಕ್ಕಳಿಗೆ ಸಿಗುವ ಯೋಜನೆಗಳು ಮಕ್ಕಳಿಗೆ ಬೇಗನೆ ತಲುಪಬೇಕು, ಆ ಮೂಲಕ ಅವರ ಶಿಕ್ಷಣಮಟ್ಟವನ್ನು ಹೆಚ್ಚಿಸಬೇಕು, ತಮ್ಮ ಮನದಲ್ಲಿನ ಕೀಳರಿಮೆಯನ್ನು ಬಿಟ್ಟು ಪ್ರತಿಯೊಬ್ಬರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವಂತಗಾಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳಿಗಿಂದ ಸರ್ಕಾರಿ ಶಾಲೆಗಳಲ್ಲೇ ಹೆಚ್ಚಿನ ಫಲಿತಾಂಶ ಬರುವುದನ್ನು ಎಲ್ಲರು ಮನಗಾಣಬೇಕು ಎಂದು ತಿಳಿಸಿದರು.

ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಲ್ಲದೇ ಅನೇಕ ಶಾಲೆಗಳು ಮುಚ್ಚಲ್ಪಟ್ಟಿವೆ, ಆದರೇ ಈ ಶಾಲೆಯಲ್ಲಿ 200ಕ್ಕೂ ಹೆಚ್ಚು ಮಕ್ಕಳು ಕಲಿಯುತ್ತಿರುವುದು ನಿಜಕ್ಕೂ ಸಂತಸದ ವಿಚಾರವಾಗಿದೆ. ಸರ್ಕಾರಿ ಶಾಲೆಗಳಲ್ಲಿನ ಮಕ್ಕಳ ಸಂಖ್ಯೆ ಇನ್ನೂ ಹೆಚ್ಚಾಗಬೇಕು ಇದಕ್ಕಾಗಿ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ. ಸಾರ್ವಜನಿಕರು ಸಹ ತಮ್ಮ ಜವಾಬ್ದಾರಿಯನ್ನು ಅರಿತರೇ ಸರ್ಕಾರಿ ಶಾಲೆಗಳನ್ನು ಮುಚ್ಚದಂತೆ ತಡೆಯಬಹುದಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿ.ಪಂ ಸದಸ್ಯರಾದ ವೇದಶ್ರೀ ಲಕ್ಷ್ಮಿನಾರಾಯಣ, ಕೆ.ಕೆಂಪರಾಜ್ ಮುಖಂಡರಾದ ಸುರೇಶ್ಬಾಬು, ಚಿಕ್ಕಮುನಿಯಪ್ಪ, ಬಿ.ಡಿ.ನಾಗಪ್ಪ, ಸಂತೋಷ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here