ಶೈಕ್ಷಣಿಕ ಪ್ರಗತಿಗೆ ಆಧುನಿಕ ತಂತ್ರಜ್ಞಾನ ಸೌಲಭ್ಯ

0
181

ಬಳ್ಳಾರಿ/ಹೊಸಪೇಟೆ: ಇ-ಗ್ರಂಥಾಲಯ, ವೆಬ್ ಲೈಬ್ರರಿ ಇತರೆ ಆಧುನಿಕ ತಂತ್ರಜ್ಞಾನ ಸೌಲಭ್ಯಗಳನ್ನು ಬಳಿಸಿಕೊಳ್ಳುವ ಮೂಲಕ ವಿದ್ಯಾರ್ಥಿ-ಯುವಜನರು, ಶೈಕ್ಷಣಿಕ ಪ್ರಗತಿಯನ್ನು ಸಾಧಿಸಬೇಕು ಎಂದು ಹಿರಿಯ ಪ್ರಾಧ್ಯಾಪಕ ಡಾ.ಕಡ್ಲಬಾಳ ಪನ್ನಂಗಧರ ಸಲಹೆ ನೀಡಿದರು.

ಸ್ಥಳೀಯ ಶ್ರೀ ಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಹಾಗೂ ವಾಣಿಜ್ಯ ವೇದಿಕೆಗಳ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಬೋಧನೆ ಮತ್ತು ಕಲಿಕೆಯಲ್ಲಿ ವೆಬ್ ಸಂಪನ್ಮೂಲಗಳು ಕುರಿತ ಒಂದು ದಿನದ ರಾಜ್ಯಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಆಧುನಿಕ ತಂತ್ರಜ್ಞಾನದಿಂದ ಸಾಕಷ್ಟು ಶಿಕ್ಷಣದಲ್ಲಿ ಉನ್ನತಿ ಸಾಧಿಸಬಹುದಾಗಿದ್ದು, ವಿದ್ಯಾರ್ಥಿಗಳು, ಆಧುನಿಕ ತಂತ್ರಜ್ಞಾನದ ಮೂಲಕ ಶಿಕ್ಷಣದಲ್ಲಿ ಪ್ರಗತಿ ಕಾಣುವ ಮೂಲಕ ದೇಶದ ಏಳ್ಗೆಗೆ ಕಾರಣರಾಗಬೇಕು ಎಂದು ಕರೆ ನೀಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಕುಮಟಾದ ಡಾ.ಎ.ವಿ.ಬಾಳಿಗಾ ಕಾಲೇಜ್ ಆಫ್ ಕಾಮರ್ಸ್ ಅಂಡ್ ಪಿ.ಜಿ.ಸೆಂಟರ್‌ನ ಗ್ರಂಥಾಲಯ ವಿಭಾಗದ ಮುಖ್ಯಸ್ಥ ಡಾ.ಶಿವಾನಂದ ಡಿ.ಬುಳ್ಳಾ ಮಾತನಾಡಿ, ಗ್ರಂಥಾಲಯದ ನೂತನ ಸಂಪನ್ಮೂಲಗಳು ಹೆಚ್ಚು ಹೆಚ್ಚು ವಿದ್ಯಾರ್ಥಿ ಸ್ನೇಹಿ ಹಾಗೂ ಓದುಗ ಕೇಂದ್ರಿತ ವಾಗಿದ್ದು, ಇವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಪ್ರಾಂಶುಪಾಲ ಡಾ.ಬಿ.ಜಿ.ಕನಕೇಶಮೂರ್ತಿ ಅಧ್ಯಕ್ಷತೆಯನ್ನು ವಹಿಸಿದ್ದರು. ಗ್ರಂಥಪಾಲಕ ಎ.ಜಿ.ವೀರಭದ್ರಪ್ಪ ಸ್ವಾಗತಿಸಿದರು. ವಿದ್ಯಾರ್ಥಿನಿ ಶ್ವೇತಾ ಮತ್ತು ಸಂಗಡಿಗರು ಪ್ರಾರ್ಥಿಸಿದರು.

LEAVE A REPLY

Please enter your comment!
Please enter your name here