ಸರ್ಕಾರಿ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸುವಿಕೆ ಕಡ್ಡಾಯ.

0
216

ಬಳ್ಳಾರಿ /ಹೊಸಪೇಟೆ:ಸರ್ಕಾರದ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ತಹಶೀಲ್ದಾರ್ ಹೆಚ್.ವಿಶ್ವನಾಥ ಅಧಿಕಾರಿಗಳಿಗೆ ಕಡಕ್ ಎಚ್ಚರಿಕೆ ನೀಡಿದ್ದಾರೆ.

ಸ್ಥಳೀಯ ಪತ್ರಿಕಾ ಭವನದಲ್ಲಿ ಗುರುವಾರ ತಾಲೂಕು ಆಡಳಿತದ ವತಿಯಿಂದ ಆಯೋಜಿಸಲಾಗಿದ್ದ ಶ್ರೀಕೃಷ್ಣ ಜಯಂತಿ ಹಾಗೂ ದಿ.ದೇವರಾಜ ಅರಸ್ ರವರ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆ.14 ರಂದು ಶ್ರೀಕೃಷ್ಣ ಜಯಂತಿ ಯನ್ನು ಹಾಗೂ ಆ.20 ರಂದು ಹಿಂದುಳಿದ ವರ್ಗಗಳ ಹರಿಕಾರ ದಿ.ದೇವರಾಜ್ ಅರಸ್ ರವರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲಾಗುತ್ತದೆ. ಸರ್ಕಾರದ ಈ ಜಯಂತಿ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಭಾಗವಹಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಅಂದು ಬೆಳಿಗ್ಗೆ ತಮ್ಮ-ತಮ್ಮ ಕಛೇರಿಗಳಲ್ಲಿ ಜಯಂತಿ ಆಚರಿಸಿದ ನಂತರ ತಾಲೂಕು ಆಡಳಿತದ ವತಿಯಿಂದ ನಡೆಸಲಾಗುವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದೂ ಸೂಚಿಸಿದರು.
ಅಲ್ಲದೆ ಆಗಸ್ಟ್ 15 ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಾಲೂಕು ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಸಭೆಗೆ ತಿಳಿಸಿದರು.
ಸಭೆಯಲ್ಲಿ ಟಿ.ಬಿ.ಡ್ಯಾಂ ವೃತ್ತದ ಸಿಪಿಐ ಆಂಜನೇಯಲು, ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ಯರಿಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಎ.ಪ್ರಭಾಕರ್, ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಎನ್.ಎಸ್.ರೇವಣಸಿದ್ದಪ್ಪ, ಶಿರಸ್ತೇದಾರ್ ಶ್ರೀಪಾದ ದೀಕ್ಷಿತ್, ಮುಖಂಡ ಬಿಸಾಟಿ ತಾಯಪ್ಪ ನಾಯಕ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here