ಸರ್ಕಾರಿ ಶಾಲೆ ಎಂಬ ಕಿಳರಿಮೆ ಬೇಡ..

0
96

ಚಿಕ್ಕಬಳ್ಳಾಪುರ/ಚಿಂತಾಮಣಿ:ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳಿಗೆ ಸರ್ಕಾರದಿಂದ ಎಲ್ಲಾ ರೀತಿಯ ಸೌಲಭ್ಯಗಳು ಸರ್ಕಾರಿ ಶಾಲೆ ಎಂಬ ಕಿಳರಿಮೆ ಬಿಟ್ಟು ಶ್ರದ್ಧೆಯಿಂದ ಓದಿದರೆ ಉತ್ತಮ ಶಿಕ್ಷಣ ದೊರೆತು ಜೀವನದಲ್ಲಿ ಉನ್ನತ ಅಲಂಕರಿಲಸು ಸಾಧ್ಯವಾಗುತ್ತದೆ ಎಂದು ಸಮಾಜ ಸೇವಕ ಟಿ.ಸಿ ವೆಂಕಟೇಶ್ ರೆಡ್ಡಿ ತಿಳಿಸಿದರು.

ತಾಲೂಕಿನ ಹೆಬ್ಬರಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಉಚಿತ ಪುಸ್ತಕ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಣೆ ಮಾಡಿ ಮಾತನಾಡಿದರು. ವಿದ್ಯಾರ್ಥಿಗಳ ಸರ್ಕಾರದಿಂದ ಮತ್ತು ದಾನಿಗಳು ನೀಡುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಪಡೆದು ಕೊಂಡು ತಾವು ಸರ್ಕಾರಿ ಶಾಲೆಯಲ್ಲಿ ಇದ್ದೇವೆ ಎಂಬ ಸರ್ಕಾರಿ ಶಾಲೆಗಳಲ್ಲಿ ಸಂಸ್ಕೃತಿ ಸಂಪ್ರದಾಯದ ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬಾಳ ಬೇಕೆಂದರು.
ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳಿಗೆ ಸರ್ಕಾರ ವಿವಿಧ ರೀತಿಯ ಸೌಲಭ್ಯಗಳನ್ನು ನೀಡುತ್ತಿದ್ದು ಶಿಕ್ಷಣಕ್ಕೆ ಬೇಕಾದ ಎಲ್ಲಾ ರೀತಿಯ ಸೌಲಭ್ಯಗಳು ಲಭ್ಯವಿದೆ ಆದ್ದರಿಂದ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಪಡೆದು ಉತ್ತಮ ಅಧಿಕಾರಿಗಳಾಗಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಮಾಜ ಸೇವಕರಾದ ಟಿ ಸಿ ವೆಂಕಟೇಶ ರೆಡ್ಡಿ ಪೆಂಚನಾಯಕ ನಾಯ್ಡು ,ಸುರೇಶ್ ಬಾಬು ,ನಾಗರಾಜ್, ಆಂಜನೇಯ ರೆಡ್ಡಿ, ಸದಾಶಿವರೆಡ್ಡಿ, ಸೈಯದ್ , ರಮೇಶ್ ,ಮತ್ತು ಶಾಲೆಯ ಶಿಕ್ಷಕ ವರ್ಗದವರು ಉಪಸ್ಥಿತಿಯಿದ್ದರು.

LEAVE A REPLY

Please enter your comment!
Please enter your name here