ಬಳ್ಳಾರಿ / ಬಳ್ಳಾರಿ:ಬರ ಪೀಡಿತ ಪ್ರದೇಶಗಳ ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳ ಎಲ್ಲಾ ರೀತಿಯ ಶುಲ್ಕಗಳನ್ನು ಕೈ ಬಿಡಬೇಕು, ಇಲ್ಲವೇ ಸರ್ಕಾರವೇ ಭರಿಸಬೇಕು. ವಿದ್ಯಾರ್ಥಿಗಳಿಗೆ ಬಸ್ ಪಾಸನ್ನು ಸಂಪೂರ್ಣ ಉಚಿತವಾಗಿ ನೀಡುವ ಸೌಲಭ್ಯವನ್ನು ಕಲ್ಪಿಸಬೇಕೆಂದು ಎಐಡಿಎಸ್ಒ ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರು
ರಾಜ್ಯವು ಸತತ 4 ವರ್ಷಗಳಿಂದ ಬರಗಾಲಕ್ಕೆ ತುತ್ತಾಗಿದೆ. ಕಲಬುರಗಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಕೋಲಾರ, ಚಾಮರಾಜನಗರ, ಮೈಸೂರು, ಬೆಂಗಳೂರು, ಹಾವೇರಿ ಇನ್ನಿತರೇ ಜಿಲ್ಲೆಗಳಲ್ಲಿ ಬರಗಾಲ ತೀವ್ರವಾಗಿದೆ ಎಂದರು.
ಆದ್ದರಿಂದ ರಾಜ್ಯ ಸರ್ಕಾರ ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಎಲ್ಲಾ ಶುಲ್ಕವನ್ನು ಕೈಬಿಡಬೇಕು ಹಾಗೂ ಅವರಿಗೆ ಉಚಿತ ಪ್ರವೇಶಾವಕಾಶ ಕಲ್ಪಿಸಬೇಕು. ಒಂದು ವೇಳೆ ವಿದ್ಯಾರ್ಥಿಗಳು ಶುಲ್ಕ ಕಟ್ಟಬೇಕಾಗಿ ಬಂದರೆ ಆ ಶುಲ್ಕವನ್ನು ಸರ್ಕಾರವೇ ಭರಿಸಬೇಕೆಂದು ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದ್ದಾರೆ.