ಸಾಂಕೇತಿಕವಾಗಿ ಟಿಪ್ಪು ಜಯಂತಿ ಆಚರಣೆ…!

0
37

ಚಿಕ್ಕಬಳ್ಳಾಪುರ/ ಚಿಂತಾಮಣಿ :- ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತ ಹಾಗೂ ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಹಜರತ್ ಟಿಪ್ಪುಸುಲ್ತಾನ್ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಪಂಚಾಯಿತಿ ಅಧ್ಯಕ್ಷರಾದ ಶಾಂತಮ್ಮ ವರದರಾಜು ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷರಾದ ವಿಶ್ವನಾಥ್ ಮತ್ತು ಜಿಲ್ಲಾ ವರಿಷ್ಠಾಧಿಕಾರಿಗಳಾದ ರೆಡ್ಡಿ ,ಉಪ ವಿಭಾಗಾಧಿಕಾರಿಗಳ ಶಿವಸ್ವಾಮಿ ದೀಪ ಬೆಳಗಿಸುವ ಮೂಲಕ ಹಾಗೂ ಹಜರತ್ ಟಿಪ್ಪುಸುಲ್ತಾನ್ ಭಾವಚಿತ್ರಕ್ಕೆ ಹೂವಿನ ಅರ್ಪಣೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು.

ಈ ಕಾರ್ಯಕ್ರಮಕ್ಕೆ ಕಾಲೇಜಿನ ವಿದ್ಯಾರ್ಥಿಗಳು ಮತ್ತು ತಾಲೂಕು ಕಚೇರಿಯ ಸಿಬ್ಬಂದಿಗಳು ಮಾತ್ರ ಹಾಜರಿದ್ದರು.ಈ ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಿದ ಮುಸ್ಲಿಂ ಸಮುದಾಯದ ಮುಖಂಡರು ಯಾರು ಭಾಗವಹಿಸಲಿಲ್ಲ.

ಈ ಸಂದರ್ಭದಲ್ಲಿ ಶಾಂತಮ್ಮ ವರದರಾಜು, ಜಿಲ್ಲಾ ವರಿಷ್ಠಾಧಿಕಾರಿಗಳಾದ ಕಾರ್ತಿಕ್ ರೆಡ್ಡಿ ,ಉಪ ವಿಭಾಗ ಅಧಿಕಾರಿ ಶಿವಸ್ವಾಮಿ, ತಹಸಿಲ್ದಾರ್ ವಿಶ್ವನಾಥ್ ಉಪ ಆರಕ್ಷಕ ಅಧೀಕ್ಷಕರಾದ ನಾಗೇಶ್ ಹಾಜರಿದ್ದರು.

LEAVE A REPLY

Please enter your comment!
Please enter your name here