ಸಿಐಟಿಯು ವತಿಯಿಂದ ಅಹೋರಾತ್ರಿ ಧರಣಿ…

0
191

ಬಳ್ಳಾರಿ /ಹೊಸಪೇಟೆ:ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ನೇತೃತ್ವದಲ್ಲಿ ಕಾರ್ಮಿಕರು ಅಹೋರಾತ್ರಿ ಧರಣಿ ನಡೆಸಿದರು.

ದುಡಿಯುವ ಜನರ ಹಕ್ಕುಗಳ ಸಂರಕ್ಷಣೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರು ಸ್ಥಳೀಯ ತಹಶೀಲ್ದಾರರ ಕಛೇರಿ ಎದುರು ಸೋಮವಾರ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6 ಗಂಟೆಯ ವರೆಗೆ ವಿನೂತನ ಧರಣಿ ನಡೆಸಿದರು.
ದುಡಿಯುವ ಕಾರ್ಮಿಕರಿಗೆ ಆಹಾರ, ಆರೋಗ್ಯ, ಶಿಕ್ಷಣ ಒದಗಿಸಬೇಕು. ಸಮಾನ ಕೆಲಸಕ್ಕೆ ಕನಿಷ್ಠ ಹಾಗೂ ನ್ಯಾಯೋಚಿತ ವೇತನ ನೀಡಬೇಕು. ಖಾಯಂ ಕೆಲಸ ಒದಗಿಸಬೇಕು. ಕಾರ್ಮಿಕ ಸಂಘಟನೆಗಳಿಗೆ ಮಾನ್ಯತೆ ನೀಡಬೇಕು. ಕಾರ್ಮಿಕರಿಗೆ ವಸತಿ ಸೌಲಭ್ಯ ಒದಗಿಸಬೇಕು. ಹಾಗೂ ಸಾಮಾಜಿಕ ಭದ್ರತೆಯನ್ನು ಒದಗಿಸಬೇಕು ಎಂದು ಧರಣಿ ನಿರತರು ಒತ್ತಾಯಿಸಿದರು.
ಸಿಐಟಿಯು ರಾಜ್ಯಾದ್ಯಂತ ಅಹೋರಾತ್ರಿ ಧರಣಿಗೆ ಕರೆ ನೀಡಿದ ಹಿನ್ನಲೆಯಲ್ಲಿ ಸಿಐಟಿಯು ಸ್ಥಳೀಯ ಘಟಕದ ನೇತೃತ್ವದಲ್ಲಿ ಕಾರ್ಮಿಕರು ಅಹೋರಾತ್ರಿ ಧರಣಿ ನಡೆಸಿದರು. ಧರಣಿಯಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಆರ್.ಭಾಸ್ಕರ್ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಜೆ.ಸತ್ಯಬಾಬು, ಮುಖಂಡರಾದ ಎಂ.ಜಂಬಯ್ಯ ನಾಯಕ, ಎ.ಕರುಣಾನಿಧಿ, ಎಂ.ಗೋಪಾಲ್, ಕೆ.ರಮೇಶ್, ಕಲ್ಯಾಣಯ್ಯ ಸೇರಿದಂತೆ ಕಾರ್ಮಿಕರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here