ಸ್ಕೇಟಿಂಗ್ ನಲ್ಲಿ ಡಬಲ್ ಮೆಡಲ್

0
174

ಬಳ್ಳಾರಿ/ಹೊಸಪೇಟೆ:ಕೊಪ್ಪಳ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಜರುಗಿದ ಅಂತರ್ ಜಿಲ್ಲಾ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಸ್ಥಳೀಯ ಶಾಂತಿನಿಕೇತನ ಶಾಲೆಯ ವಿದ್ಯಾರ್ಥಿ ಪ್ರಥಮ ಸ್ಥಾನ ಗಳಿಸುವ ಮೂಲಕ ಎರಡು ಬಂಗಾರದ ಪದಕಗಳನ್ನು ಗಳಿಸಿದ್ದಾನೆ.

ಸ್ಥಳೀಯ ಶಾಂತಿನಿಕೇತನ ಶಾಲೆಯಲ್ಲಿ 4ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿರುವ ನಗರದ ಮಡ್ಡಿ ಮಂಜುನಾಥ ಎಂಬುವವರ ಪುತ್ರ ಭಾರ್ಗವ್ ಮ‌‌ಡ್ಡಿ, ಅಂತರ್ ಜಿಲ್ಲಾ ರೋಲರ್ ಸ್ಕೇಟಿಂಗ್ ನಲ್ಲಿ 500 ಮೀಟರ್ ಹಾಗೂ 300 ಮೀಟರ್ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಎರಡು ಬಂಗಾರದ ಪದಕಗಳನ್ನು ಗಳಿಸಿದ್ದಾನೆ.
ಎರಡು ಬಂಗಾರದ ಪದಕ ಪಡೆಯುವ ಮೂಲಕ ಶಾಲೆಗೆ ಹಾಗೂ ನಗರಕ್ಕೆ ಕೀರ್ತಿ ತಂದ ವಿದ್ಯಾರ್ಥಿಯನ್ನು ಶಾಲಾ ಆಡಳಿತ ಮಂಡಳಿ, ಪೋಷಕರು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here