ಹಂಪಿಯಲ್ಲಿ ಸಂಚಾರ ಅಸ್ತವ್ಯಸ್ತ

0
248

ಬಳ್ಳಾರಿ/ಹೊಸಪೇಟೆ:ವಿಶ್ವ ಪ್ರಸಿದ್ಧ ಹಂಪಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿರುವ ಹಿನ್ನಲೆಯಲ್ಲಿ ಹಂಪಿಯಲ್ಲಿಂದು ಸಂಚಾರ ಅಸ್ತವ್ಯಸ್ಥಗೊಂಡಿದೆ.ಸಾಲು ಸಾಲು ರಜೆಗಳು ಇರುವ ಹಿನ್ನಲೆಯಲ್ಲಿ ಮತ್ತು ದಸರಾ ಹಬ್ಬದ ಪ್ರಯುಕ್ತ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಹಂಪಿಗೆ ಆಗಮಿಸಿರುವ ಹಿನ್ನಲೆಯಲ್ಲಿ ಹಂಪಿಯಲ್ಲಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ.ಹಂಪಿಯಿಂದ ಕಮಲಾಪುರಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿ ಶ್ರೀಕೃಷ್ಣದೇವರಾಯ ದೇವಸ್ಥಾನದಿಂದ ಉದ್ಧಾನ ವೀರಭದ್ರ ದೇವಸ್ಥಾನದ ವರೆಗೆ ಹಾಗೂ ಕಡ್ಡಿರಾಂಪುರ ರಸ್ತೆ ಮತ್ತು ವಿಜಯ ವಿಠ್ಠಲ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಹೆಚ್ಚಿನ ವಾಹನಗಳ ದಟ್ಟಣೆಯಿಂದ ಟ್ರಾಫಿಕ್ ಜಾಮ್ ಉಂಟಾಗಿದ್ದು. ಪ್ರವಾಸಿಗರು ಪರದಾಡುವಂತಾಗಿತ್ತು. ಸಂಚಾರ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುವಂತಾಗಿತ್ತು. ಸಂಚಾರ ನಿಯಮಗಳನ್ನು ಹಂಪಿಯಲ್ಲಿ ಕಟ್ಟು ನಿಟ್ಟಾಗಿ ಜಾರಿ ಮಾಡದ ಹಿನ್ನಲೆಯಲ್ಲಿ ಮತ್ತು ಸ್ಮಾರಕಗಳ ಬಳಿ ಸರಿಯಾದ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸದ ಹಿನ್ನಲೆಯಲ್ಲಿ ವಾಹನಗಳ ದಟ್ಟಣೆಯಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿ ಪ್ರವಾಸಿಗರು ಹಾಗೂ ವಾಹನಗಳ ಚಾಲಕರು ಪರದಾಡಿದರು.

LEAVE A REPLY

Please enter your comment!
Please enter your name here