ಹಂಪಿ ಕನ್ನಡ ವಿ.ವಿ.ಯ ಬೆಳ್ಳಿಹಬ್ಬ

0
362

ಬಳ್ಳಾರಿ /ಹೊಸಪೇಟೆ:ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಬೆಳ್ಳಿಹಬ್ಬ-25 ಸಮಾರಂಭ ಇದೇ ಸೆ.12 ರಿಂದ 18 ರ ವರೆಗೆ ಹಂಪಿ ಕನ್ನಡ ವಿಶ್ವವಿದ್ಯಾಲಯದ ಆವರಣದಲ್ಲಿ ಜರುಗಲಿದೆ.
ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಆವರಣದಲ್ಲಿ ಸೆ.12 ರಂದು ಸಂಜೆ 5 ಗಂಟೆಗೆ ಜರುಗಲಿರುವ ಸಮಾರಂಭದಲ್ಲಿ ಕನ್ನಡ ವಿಶ್ವವಿದ್ಯಾಲಯದ ಬೆಳ್ಳಿಹಬ್ಬ-25 7 ದಿನಗಳ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನ ನೀಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕವಿವಿ ಕುಲಪತಿ ಡಾ.ಮಲ್ಲಿಕಾ ಎಸ್.ಘಂಟಿ ವಹಿಸಲಿದ್ದಾರೆ.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಸಮಾಜ ಕಲ್ಯಾಣ ಸಚಿವ ಹೆಚ್.ಆಂಜನೇಯ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಸಂಸದ ಬಿ.ಶ್ರೀರಾಮುಲು, ವಿಧಾನ ಪರಿಷತ್ ಸದಸ್ಯರಾದ ಅಲ್ಲಂ ವೀರಭದ್ರಪ್ಪ, ಕೆ.ಸಿ.ಕೊಂಡ‌ಯ್ಯ, ಶಾಸಕ ಬಿ.ಎಸ್.ಆನಂದ್ ಸಿಂಗ್ ಅಲ್ಲದೆ ವಿಶೇಷ ಆಹ್ವಾನಿತರಾಗಿ ಹಿರಿಯ ಸಾಹಿತಿ ನಾಡೋಜ ಡಾ.ಪಾಟೀಲ ಪುಟ್ಟಪ್ಪ, ಹಂಪಿ ಕವಿವಿ ಸಂಸ್ಥಾಪಕ ಕುಲಪತಿ ನಾಡೋಜ ಡಾ.ಚಂದ್ರಶೇಖರ ಕಂಬಾರ, ಉತ್ತರ ಕರ್ನಾಟಕ ವಲಯದ ಪೋಸ್ಟ್ ಮಾಸ್ಟರ್ ಜನರಲ್ ವೀಣಾ ಆರ್.ಶ್ರೀನಿವಾಸ್ ಭಾಗವಹಿಸಲಿದ್ದಾರೆ.

ವಿಶ್ರಾಂತ ಕುಲಪತಿಗಳಿಗೆ ಸನ್ಮಾನ
ಕನ್ನಡ ವಿಶ್ವವಿದ್ಯಾಲಯದ ಬೆಳ್ಳಿಹಬ್ಬದ ಉದ್ಘಾಟನಾ ಸಮಾರಂಭದಲ್ಲಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ.ಚಂದ್ರಶೇಖರ ಕಂಬಾರ, ‌ಡಾ.ಹೆಚ್.ಜೆ.ಲಕ್ಕಪ್ಪಗೌಡ, ಡಾ.ಬಿ.ಎ.ವಿವೇಕ ರೈ, ಡಾ.ಎ.ಮುರಿಗೆಪ್ಪ, ಡಾ.ಹಿ.ಚಿ.ಬೋರಲಿಂಗಯ್ಯ ರನ್ನು ಹಾಗೂ ಮಾಜಿ ಕುಲಸಚಿವರಾದ ಡಾ.ಕೆ.ವಿ.ನಾರಾಯಣ, ಕೆ.ಜನಾರ್ಧನರಾವ್, ಪ್ರೊ.ಎನ್.ಬಿ.ಚಂದ್ರಮೋಹನ್, ಡಾ.ಪುರುಷೋತ್ತಮ ಬಿಳಿಮಲೆ, ಡಾ.ಕೆ.ಎಂ.ಸುರೇಶ್, ಡಾ.ಮಲ್ಲೇಪುರಂ ಜಿ.ವೆಂಕಟೇಶ್, ಡಾ.ಕರೀಗೌಡ ಬೀಚನಹಳ್ಳಿ, ವಿ.ಶಂಕರ್, ಎಸ್.ಎಸ್.ಪೂಜಾರ, ಡಾ.ಮಂಜುನಾಥ ಬೇವಿನಕಟ್ಟಿ, ಡಾ.ವಿಜಯ್ ಪೂಣಚ್ಛ ತಂಬಂಡ ರನ್ನು ಸನ್ಮಾನಿಸಲಾಗುತ್ತದೆ.

ಪುಸ್ತಕಗಳ ಬಿಡುಗಡೆ-ಕಟ್ಟಡಗಳ ಉದ್ಘಾಟನೆ
ಸಮಾರಂಭದಲ್ಲಿ 25 ಪುಸ್ತಕಗಳ ಬಿಡುಗಡೆ, ನುಡಿ ತರಗತಿ, ಹೆಣ್ಣುಮಕ್ಕಳ ವಸತಿ ನಿಲಯ, ಚರಿತ್ರೆ ಅಧ್ಯಯನ ವಿಭಾಗ ಕಟ್ಟಡ, ಬುಡಕಟ್ಟು ಅಧ್ಯಯನ ವಿಭಾಗದ ಕಟ್ಟಡಗಳ ಉದ್ಘಾಟನೆ, ಪುಸ್ತಕಗಳ ಪ್ರದರ್ಶನ, ಛಾಯಾಚಿತ್ರ ಪ್ರದರ್ಶನ, ಬೆಳ್ಳಿಹಬ್ಬದ ವಿಶೇಷ ಅಂಚೆ ಲಕೋಟೆ ಬಿಡುಗಡೆ ಜರುಗಲಿದೆ.

ವಿಚಾರ ಸಂಕಿರಣ-ಸಾಂಸ್ಕೃತಿಕ ಕಾರ್ಯಕ್ರಮಗಳು
ಕನ್ನಡ ವಿಶ್ವವಿದ್ಯಾಲಯದ ಬೆಳ್ಳಿಹಬ್ಬದ ಅಂಗವಾಗಿ ಸೆ.13 ರಂದು ಬೆಳಿಗ್ಗೆ 10-30 ಗಂಟೆಗೆ ಭವಿಷ್ಯದ ಕನ್ನಡ ವಿಶ್ವವಿದ್ಯಾಲಯ ಎಂಬ ವಿಷಯದ ಕುರಿತು ವಿಚಾರ ಸಂಕಿರಣ ಜರುಗಲಿದೆ. ವಿಚಾರ ಸಂಕಿರಣದ ಉದ್ಘಾಟನೆಯನ್ನು ವಿಶ್ರಾಂತ ಕುಲಪತಿ ಡಾ.ಚಂದ್ರಶೇಖರ ಕಂಬಾರ ಉದ್ಘಾಟಿಸಲಿದ್ದಾರೆ. ವಿಚಾರ ಸಂಕಿರಣದಲ್ಲಿ ಡಾ.ಹೆಚ್.ಜೆ.ಲಕ್ಕಪ್ಪ ಗೌಡ, ಡಾ.ಬಿ.ಎ.ವಿವೇಕ ರೈ, ಡಾ.ಎ.ಮುರಿಗೆಪ್ಪ, ಡಾ.ಕೆ.ವಿ.ನಾರಾಯಣ, ಡಾ.ಹಿ.ಚಿ.ಬೋರಲಿಂಗಯ್ಯ, ಡಾ.ಸರಜೂ ಕಾಟ್ಕರ್ ವಿಷಯ ಮಂಡಿಸಲಿದ್ದಾರೆ. ಅಧ್ಯಕ್ಷತೆಯನ್ನು ಕುಲಪತಿ ಡಾ.ಮಲ್ಲಿಕಾ ಎಸ್.ಘಂಟಿ ವಹಿಸಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಜರುಗಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಿರಿಯ ಚಿಂತಕ ಪ್ರೊ.ಜಿ.ಕೆ.ಗೋವಿಂದ ರಾವ್ ಉದ್ಘಾಟಿಸಲಿದ್ದಾರೆ. ಮೈಸೂರಿನ ಜನಮನ ತಂಡದಿಂದ ಜನಪದ ಮತ್ತು ತತ್ವಪದಗಳ ಗಾಯನ ಹಾಗೂ ಬೆಂಗಳೂರಿನ ಕಲಾ ಗಂಗೋತ್ರಿ ತಂಡದಿಂದ ನಾಟಕ ಮುಖ್ಯಮಂತ್ರಿ ಪ್ರದರ್ಶನಗೊಳ್ಳಲಿದೆ.
ಸೆ.14 ರಂದು ಬೆಳಿಗ್ಗೆ 10-30 ಗಂಟೆಗೆ ಆರಂಭವಾಗುವ ಕರ್ನಾಟಕದ ಜ್ವಲಂತ ಸಮಸ್ಯೆಗಳು-ನೀರು, ಬರ ನಿರ್ವಹಣೆ ಕುರಿತ ವಿಚಾರ ಸಂಕಿರಣವನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ದಿನೇಶ್ ಅಮೀನಮಟ್ಟು ಉದ್ಘಾಟಿಸಲಿದ್ದಾರೆ. ಡಾ.ಟಿ.ಆರ್.ಚಂದ್ರಶೇಖರ್, ಜನಾರ್ಧನ ಕೆಸರಗದ್ದೆ, ಡಾ.ಲಕ್ಷ್ಮಿಪತಿ ಸಿ.ಜಿ. ವಿಷಯ ಮಂಡಿಸಲಿದ್ದಾರೆ. ಡಾ.ಮಲ್ಲಿಕಾ ಎಸ್.ಘಂಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಜರುಗಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ಹಿರಿಯ ರಂಗಭೂಮಿ ಕಲಾವಿದೆ ಸುಭದ್ರಮ್ಮ ಮನ್ಸೂರು ಉದ್ಘಾಟಿಸಲಿದ್ದಾರೆ.
ಸೆ.15 ರಂದು ಬೆಳಿಗ್ಗೆ 10 ಗಂಟೆಗೆ ಜರುಗಲಿರುವ ಉನ್ನತ ಶಿಕ್ಷಣ ಸಾಧ್ಯತೆ ಸವಾಲುಗಳು ಕುರಿತ ವಿಚಾರ ಸಂಕಿರಣವನ್ನು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ವಿಚಾರ ಸಂಕಿರಣದಲ್ಲಿ ಬೆಂಗಳೂರು ಕ್ಲಸ್ಟರ್ ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಡಾ.ರವೀಂದ್ರ ರೇಷ್ಮೆ, ಪ್ರಾಧ್ಯಾಪಕರಾದ ಡಾ.ಪೃಥ್ವಿದತ್ತ ಚಂದ್ರಶೋಭಿ, ಡಾ.ಕೆ.ವೈ.ನಾರಾಯಣಸ್ವಾಮಿ ವಿಷಯ ಮಂಡಿಸಲಿದ್ದಾರೆ. ಕುಲಪತಿ ಡಾ.ಮಲ್ಲಿಕಾ ಎಸ್.ಘಂಟಿ ಅಧ್ಯಕ್ಷತೆ ವಹಿಸಲಿದ್ದಾರೆ. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ಯಕ್ಷಗಾನ ಮತ್ತು ಬಯಲಾಟ ಅಕಾಡೆಮಿ ಅಧ್ಯಕ್ಷ ಬೆಳಗಲ್ಲು ವೀರಣ್ಣ ನೆರವೇರಿಸಲಿದ್ದಾರೆ. ಜರುಗಲಿವೆ.
ಸೆ.16 ರಂದು ಬೆಳಿಗ್ಗೆ 10-30 ಗಂಟೆಗೆ ಜರುಗಲಿರುವ ಕರ್ನಾಟಕದ ಅಭಿವೃದ್ಧಿ ಸಾಧ್ಯತೆ ಸವಾಲುಗಳು ವಿಚಾರ ಸಂಕಿರಣವನ್ನು ಹಂಪಿ ಕವಿವಿ ಪ್ರಾಧ್ಯಾಪಕ ಡಾ.ಎಂ.ಚಂದ್ರ ಪೂಜಾರಿ ಉದ್ಘಾಟಿಸಲಿದ್ದಾರೆ. ವಿಚಾರ ಸಂಕಿರಣದಲ್ಲಿ ಪ್ರಾಧ್ಯಾಪಕರಾದ ಡಾ.ಛಾಯಾ ದೇವಗಾಂವಕರ್, ಡಾ.ಎಸ್.ಟಿ.ಬಾಗಲಕೋಟಿ, ಪತ್ರಕರ್ತ ಮತ್ತು ಚಿಂತಕ ದೇವು ಪತ್ತಾರ ವಿಷಯ ಮಂಡಿಸಲಿದ್ದಾರೆ. ಅಧ್ಯಕ್ಷತೆಯನ್ನು ಕುಲಪತಿ ಡಾ.ಮಲ್ಲಿಕಾ ಎಸ್.ಘಂಟಿ ವಹಿಸಲಿದ್ದಾರೆ. ನಂತರ ಜರುಗಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ಹಿರಿಯ ಜಾನಪದ ವಿಧ್ವಾಂಸ ಪ್ರೊ.ಹಿ.ಶಿ.ರಾಮಚಂದ್ರೇಗೌಡ ಉದ್ಘಾಟಿಸಲಿದ್ದಾರೆ.
ಸೆ.17 ರಂದು ಬೆಳಿಗ್ಗೆ 10-30ಕ್ಕೆ ಜರುಗಲಿರುವ ಸಾಮಾಜಿಕ, ರಾಜಕೀಯ ಕರ್ನಾಟಕ ವರ್ತಮಾನ ಮತ್ತು ಭವಿಷ್ಯ ಕುರಿತ ವಿಚಾರ ಸಂಕಿರಣವನ್ನು ಹಿರಿಯ ಸಾಹಿತಿ ಡಾ.ಕಮಲಾ ಹಂಪನಾ ಉದ್ಘಾಟಿಸಲಿದ್ದಾರೆ. ವಿಚಾರ ಸಂಕಿರಣದಲ್ಲಿ ಕವಿವಿ ಕಾರ್ಯಕಾರಿ ಸಮಿತಿ ಸದಸ್ಯ ಪ್ರೊ.ಅಲ್ಲಮಪ್ರಭು ಬೆಟ್ಟದೂರು, ಲೇಖಕಿ ಭಾನು ಮುಸ್ತಾಕ್, ಪ್ರಾಧ್ಯಾಪಕ ಡಾ.ವೆಂಕಟಗಿರಿ ದಳವಾಯಿ ವಿಚಾರ ಮಂಡಿಸಲಿದ್ದಾರೆ. ಅಧ್ಯಕ್ಷತೆಯನ್ನು ಕುಲಪತಿ ಡಾ.ಮಲ್ಲಿಕಾ ಎಸ್.ಘಂಟಿ ವಹಿಸಲಿದ್ದಾರೆ. ನಂತರ ಜರುಗಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ಹಿರಿಯ ಸಾಹಿತಿ ಮತ್ತು ಚಿಂತಕ ಡಾ.ಚಂದ್ರಶೇಖರ ಪಾಟೀಲ್ ನೆರವೇರಿಸಲಿದ್ದಾರೆ.
ಸೆ.18 ರಂದು ಬೆಳಿಗ್ಗೆ 10-30 ಗಂಟೆಗೆ ಜರುಗಲಿರುವ ಕರ್ನಾಟಕದ ಸಾಂಸ್ಕೃತಿಕ ವಿದ್ಯಮಾನಗಳು ಎಂಬ ವಿಷಯ ಕುರಿತ ವಿಚಾರ ಸಂಕಿರಣವನ್ನು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ.ಕೆ.ಮರುಳಸಿದ್ದಪ್ಪ ಉದ್ಘಾಟಿಸಲಿದ್ದಾರೆ. ವಿಚಾರ ಸಂಕಿರಣದಲ್ಲಿ ಎನ್.ಎಸ್.ಡಿ. ನಿರ್ದೇಶಕ ಸಿ.ಬಸವಲಿಂಗಯ್ಯ, ಚಿಂತಕ ಕೋಟಿಗಾನಹಳ್ಳಿ ರಾಮಯ್ಯ, ಕವಿವಿ ಕಾರ್ಯಕಾರಿ ಸಮಿತಿ ಸದಸ್ಯ ಡಾ.ವೀರಣ್ಣ ರಾಜೂರ ವಿಷಯ ಮಂಡಿಸಲಿದ್ದಾರೆ. ಅಧ್ಯಕ್ಷತೆಯನ್ನು ಕುಲಪತಿ ಡಾ.ಮಲ್ಲಿಕಾ ಎಸ್.ಘಂಟಿ ವಹಿಸಲಿದ್ದಾರೆ. ನಂತರ ಜರುಗಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ಹಿರಿಯ ಸಾಹಿತಿ ಮತ್ತು ಚಿಂತಕ ಡಾ.ಕಾಳೇಗೌಡ ನಾಗವಾರ ಉದ್ಘಾಟಿಸಲಿದ್ದಾರೆ.

LEAVE A REPLY

Please enter your comment!
Please enter your name here