ಹೆದ್ದಾರಿ ತಡೆದು ರೈತರಿಂದ ಪ್ರತಿಭಟನೆ

0
158

ಬೀದರ್/ಬಸವಕಲ್ಯಾಣ: ತೊಗರಿ ಖರೀದಿಗೆ ನೋಂದಣಿ ಅವಧಿ ವಿಸ್ತರಣೆ ಮಾಡಬೇಕು, ಕಬ್ಬಿಗೆ ಮುಂಗಡ ಪಾವತಿ ಮಾಡಬೇಕು ಎನ್ನುವ ಪ್ರಮುಖ ಬೇಡಿಕೆ ಸೇರಿದಂತೆ ರೈತರ ವಿವಿಧ ಬೇಡಿಕೆ ಈಡೇರಿಸ ಬೇಕೆಂದು ಒತ್ತಾಯಿಸಿ ತಾಲ್ಲೂಕಿನ ರಾಜೇಶ್ವರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 9ರ ಮೇಲೆ ರೈತರಿಂದ ಕೆಲ ಕಾಲ ಪ್ರತಿಭಟನೆ ನಡೆಸಿ ಹೆದ್ದಾರಿ ತಡೆ ನಡೆಸಿದ ಪ್ರಸಂಗ ಜರುಗಿತು.

ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸುಮಾರು ಒಂದೂವರೆ ಗಂಟೆಗಳ ಕಾಲ ಕುಳಿತು ಹೆದ್ದಾರಿ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು. ಹೀಗಾಗಿ ಮುಂಬೈ ಹೈದರಾಬಾದಗೆ ಸಂಚರಿಸುವ ವಾಹನಗಳು ಅನ್ಯ ಮಾರ್ಗವಿಲ್ಲದೆ ರಸ್ತೆ ಮೇಲೆ ನಿಲ್ಲುವಂತಾಯಿತು. ಮುಂಜಾಗೃತ ಕ್ರಮವಾಗಿ ಕೆಲ ರೈತರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.

ಸ್ಥಳಕ್ಕೆ ಆಗಮಿಸಿದ ಸಹಾಯಕ ಆಯುಕ್ತ ಶರಣಬಸಪ್ಪ ಕೊಟಪ್ಪಗೋಳ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಚಂದ್ರಶೇಖರ ಜಮಖಂಡಿ, ಜಿಪಂ ಸದಸ್ಯ ಗುಂಡುರೆಡ್ಡಿ ಸೇರಿದಂತೆ ರೈತ ಮುಖಂಡರು, ಪ್ರಮುಖರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here