ವಿದ್ಯಾರ್ಥಿಗಳು ಸೋಲು-ಗೆಲವುಗಳನ್ನು ಸಮನಾಗಿ ಸ್ವೀಕರಿಸಿ

0
212

ಬಳ್ಳಾರಿ /ಹೊಸಪೇಟೆ: ಪರಸ್ಪರ ಸ್ನೇಹ ವೃದ್ಧಿಗೆ ಕ್ರೀಡೆಗಳು ಉತ್ತಮ ವೇದಿಕೆಯಾಗಿದ್ದು, ವಿದ್ಯಾರ್ಥಿಗಳು ಸೋಲು-ಗೆಲವುಗಳನ್ನು ಸಮನಾಗಿ ಸ್ವೀಕರಿಸಬೇಕು ಎಂದು ಹಂಪಿ ಕ್ಷೇತ್ರದ ಜಿಪಂ ಸದಸ್ಯ ಪ್ರವೀಣ್ ಸಿಂಗ್ ಹೇಳಿದರು.

ಸ್ಥಳೀಯ ತಾಲ್ಲೂಕು ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಎರಡು ದಿನಗಳ ತಾಲ್ಲೂಕು ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಕ್ರೀಡೆಗಳನ್ನು ಸ್ನೇಹ-ಸಬಂಧದ ಪ್ರತೀಕವಾಗಿ ಸ್ವೀಕರಿಸುವ ಮಾನಭಾವನೆಯನ್ನು ವಿದ್ಯಾರ್ಥಿದಸೆಯಿಂದಲೇ ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ತಾಪಂ ಅಧ್ಯಕ್ಷೆ ಜೋಗದ ನೀಲಮ್ಮ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಗಾದಿಲಿಂಗಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗಾದಿಗನೂರು ಹಾಲಪ್ಪ, ಬಿಜೆಪಿ ಮುಖಂಡ ಧಮೇಂದ್ರ ಸಿಂಗ್, ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಡಿ.ಜೋಷಿ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ರೇವಣ್ಣ ಸಿದ್ದಪ್ಪ, ಪ್ರಧಾನ ಕಾರ್ಯದರ್ಶಿ ಮಲ್ಲೇಶಪ್ಪ, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಬಸವರಾಜ ಜಟ್ಟಿ, ಎ.ಎಂ.ಸುಧಾಕರ ಸೇರಿದಂತೆ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರ, ಮುಖ್ಯಗುರುಗಳ ದೈಹಿಕ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಜರಿದ್ದರು. ತಾಲ್ಲೂಕಿನ ವಿವಿಧ ಶಾಲೆಗಳ 1250ಕ್ಕೂ ಹೆಚ್ಚು ವಿದ್ಯಾರ್ಥಿ ಕ್ರೀಡೆಗಳಲ್ಲಿ ಭಾಗವಹಿಸಿದ್ದರು. ಶಿಕ್ಷಣ ಇಲಾಖೆ ಹಾಗೂ ದೀಪಾಯನ ಆಂಗ್ಲ ಮಾಧ್ಯಮ ಶಾಲೆ ಸಹಯೋಗದಲ್ಲಿ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು.

LEAVE A REPLY

Please enter your comment!
Please enter your name here