ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಕೆ.!?

0
137

ಚಿಕ್ಕಬಳ್ಳಾಪುರ/ ಚಿಂತಾಮಣಿ: ಚೌಡದೇನಹಳ್ಳಿ ಕಾಲೋನಿಯ ದಲಿತರು ಹಲವು ತಿಂಗಳುಗಳಿಂದ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಅನೇಕ ಪ್ರತಿಭಟನೆ ಮಾಡುತ್ತಾ ರಾಜ್ಯದ ಗಮನ ಸೆಳೆಯುತ್ತಿದ್ದಾರೆ. ಆದರೆ ಅಧಿಕಾರಿಗಳು ಮಾತ್ರ ದಲಿತರ ಸಮಸ್ಯೆಗಳಿಗೆ ಶಾಶ್ವತ ವಾದ ಪರಿಹಾರ ಕಲ್ಪಿಸದ ಕಾರಣ ,ಮುಂದಿನ ಲೋಕಸಭಾ ಚುನಾವಣೆ ಬಹಿಷ್ಕರಿಸುವುದಾಗಿ ಚೌಡದೇನಹಳ್ಳಿ ಗ್ರಾಮಸ್ಥರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ತಾಲ್ಲೂಕಿನ ಅಂಬಾಜಿದುರ್ಗ ಹೋಬಳಿ ಶೆಟ್ಟಹಳ್ಳಿ ಗ್ರಾಮ ಪಂಚಾಯತಿಯ ವ್ಯಾಪ್ತಿಯ ಚೌಡದೇನಹಳ್ಳಿ ಕಾಲೋನಿಯಲ್ಲಿ ಕೂಲಿ ಮಾಡಿಕೊಂಡು ಜೀವನ ಮಾಡುವ 50ಕ್ಕೂ ಹೆಚ್ಚು ದಲಿತ ಕುಟುಂಬಗಳು ವಾಸವಾಗಿವೆ,ಚೌಡದೇನಹಳ್ಳಿ ಗ್ರಾಮದ ಸರ್ವೆ ನಂಬರ್ 52 ವಿವಾದಿತ ಸ್ಥಳದಲ್ಲಿ ದಲಿತರು ಗುಡಿಸಲುಗಳನ್ನು ಹಾಕಿಕೊಂಡಿದ್ದು ಈ ಜಮೀನಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ.

ಭಾನುವಾರ ವಿವಾದಿತ ಸ್ಥಳದಲ್ಲಿ ನ ಹುಣಸೇ ಮರಗಳನ್ನು ಹುಣಸೇ ಹಣ್ಣು ದಲಿತರು ಕೀಳುವ ವಿಚಾರದಲ್ಲಿ ಗಲಾಟೆ ನಡೆದಿದ್ದು , ಶೆಟ್ಟಹಳ್ಳಿ ಗ್ರಾಮಪಂಚಾಯತಿ ಅಧಿಕಾರಿಗಳು ಪೊಲೀಸರ ನೆರವಿನೊಂದಿಗೆ ಸಮಸ್ಯೆ ಬಗೆಹರಿಸಲು ಮುಂದಾಗಿದ್ದಾರೆ.

ವಿವಾದಿತ ಸ್ಥಳದಲ್ಲಿನ ಗುಡಿಸಲುಗಳನ್ನು ಮತ್ತೆ ಸವರ್ಣೀಯರು ಕಿತ್ತು ಹಾಕಿರುವುದನ್ನು ಖಂಡಿಸಿದರು ಸ್ಥಳಕ್ಕೆ ಡಿಸಿ ಆಗಮಿಸಿ ಸಮಸ್ಯೆಗಳನ್ನು ಬಗೆಹರಿಸಬೇಕು ಇಲ್ಲವಾದಲ್ಲಿ ಈ ಬಾರಿ ಲೋಕಸಭಾ ಚುನಾವಣೆ ಬಹಿಷ್ಕರಿಸುವುದಾಗಿ ದಲಿತರು ಎಚ್ಚರಿಕೆ ನೀಡಿದರು.

LEAVE A REPLY

Please enter your comment!
Please enter your name here