2017 ರ ಉದ್ದಿಮೆ ಶೃಂಗಸಭೆಗೆ ತೆರೆ

0
184

ಬಳ್ಳಾರಿ/ ಹೊಸಪೇಟೆ : ಇಲ್ಲಿಗೆ ಸಮೀಪದ ಮಲಪನಗುಡಿಯ ವಿಜಯಶ್ರೀ ಹೆರಿಟೇಜ್ ರೆಸಾರ್ಟ್‌ ನಲ್ಲಿ ಎರಡು ದಿನಗಳ ಬಳ್ಳಾರಿ ಉದ್ದಿಮೆ ಶೃಂಗಸಭೆ- 2017ಗೆ ಭಾನುವಾರ ಸಂಜೆ ವಿದ್ಯುಕ್ತ ತೆರೆ ಬಿತ್ತು.

ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಜಿಲ್ಲಾಧಿಕಾರಿ ರಾಮಪ್ರಸಾತ್ ಮನೋಹರ್ ಮಾತನಾಡಿ, ಬಳ್ಳಾರಿ ಉದ್ದಿಮೆ ಶೃಂಗಸಭೆಗೆ ಜನ ನಿರೀಕ್ಷೆ ಮೀರಿ ಬೆಂಬಲ ವ್ಯಕ್ತಪಡಿಸಿದ್ದಾರೆ. 280 ಉದ್ದಿಮೆದಾರರು 100ಕೋಟಿ ಬಂಡವಾಳ ಹೂಡಲು ಆಸಕ್ತಿ ವಹಿಸಿ, ಒಡಂಬಡಿಕೆಗೆ ಸಹಿ ಹಾಕಿದ್ದಾರೆ ಎಂದರು.

ಸಿದ್ದ ಉಡುಪು ತಯಾರಿಕೆ, ಆಹಾರ ಸಂಸ್ಕರಣೆ, ಸೌರಶಕ್ತಿ, ಪ್ರವಾಸೋದ್ಯಮ, ಉಕ್ಕಿನ ಉದ್ಯಮ ಆರಂಭಿಸುವುದಕ್ಕೆ ಹೆಚ್ಚಿನ ಜನ ಒಲವು ವ್ಯಕ್ತಪಡಿಸಿದ್ದಾರೆ. ಎಷ್ಟು ಹೂಡಿಕೆಯಾಗಿದೆ ಎನ್ನುವುದಕ್ಕಿಂತ ಎಷ್ಟು ಉದ್ಯೋಗಗಳು ಸೃಷ್ಠಿಯಾಗಲಿವೆ ಎನ್ನುವುದು ಮುಖ್ಯ. ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಸೃಷ್ಠಿಯಾದರೆ ನಿರುದ್ಯೋಗ ಸಮಸ್ಯೆಯನ್ನು ಸ್ವಲ್ಪ ಮಟ್ಟಿಗೆ ಸುಧಾರಿಸಲು ಸಾಧ್ಯವಾಗುತ್ತದೆ ಎಂದರು.

ಹೊಸದಾಗಿ ಉದ್ದಿಮೆ ಸ್ಥಾಪಿಸಬೇಕಾದರೆ ಸಾಕಷ್ಟು ಸಮಸ್ಯೆಗಳು ತಲೆದೋರಲಿವೆ. ಅದರಲ್ಲಿ ಭೂಮಿ ಮತ್ತು ನೀರಿನ ಸಮಸ್ಯೆ ತೀವ್ರವಾಗಿದೆ. ಇವೆರಡು ಸಮಸ್ಯೆಗಳನ್ನು ಬಗೆಹರಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ ಎಂದರು.

ಮಹಿಳಾ ಅಭಿವೃದ್ದಿ ನಿಗಮದ ಅಧ್ಯಕ್ಷೆ ಭಾರತಿ ಶಂಕರ್ ಮಾತನಾಡಿದರು. ಉಪವಿಭಾಗಾಧಿಕಾರಿ ಪ್ರಶಾಂತ ಮಿಶ್ರಾ, ಮೆದು ಕಬ್ಬಿಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ವೈ.ಶ್ರೀನಿವಾಸ್, ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕ ಮೃತ್ಯುಂಜಯ, ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಉಪಾಧ್ಯಕ್ಷ ಸಿ.ಜಿ.ಶ್ರೀನಿವಾಸ್‌ರಾವ್ ಇದ್ದರು.

LEAVE A REPLY

Please enter your comment!
Please enter your name here