ಕೆರೆಕಟ್ಟೆಗಳಿಗೆ ನೀರು ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ.

0
128

ಮಂಡ್ಯ/ಮಳವಳ್ಳಿ: ನಂಜಾಪುರ ಏತ ನೀರಾವರಿಯಿಂದ ಕೆರೆಕಟ್ಟೆಗಳಿಗೆ ನೀರು ಬಿಡುವಂತೆ ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘ ಹಾಗೂ ಬಿಜಿಪುರ ಹಲವಾರ ನಾಲಾ ರೈತ ಹಿತಾರಕ್ಷಣಾಸಮಿತಿ ವತಿಯಿಂದ ಮಳವಳ್ಳಿ ತಾಲ್ಲೂಕಿನ ಕಲ್ಕುಣಿ ಗ್ರಾಮದ ಕಾವೇರಿ ನೀರಾವರಿ ನಿಗಮ ಕಚೇರಿಗೆ ನೂರಾರು ರೈತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ತಮಿಳು ನಾಡಿಗೆ ನೀರು ಬಿಟ್ಟಿರುವುದನ್ನು ವಿರೋದಿಸಿದ ಪ್ರತಿಭಟನಾಕಾರರು ಘೋಷಣೆ ಕೂಗುತ್ತಾ ಈ ಕೂಡಲೇ ನಾಲಾಗಳ ಮೂಲಕ ಕೆರೆಕಟ್ಟೆಗಳಿಗೆ ತುಂಬಿಸಿ ಜಾನುವಾರುಗಳಿಗೆ ಕುಡಿಯುವ ನೀರಿಗೆ ಅವಕಾಶ ನೀಡಬೇಕು ಇಲ್ಲದಿದ್ದರೆ ಈ ಜಾಗ ಬಿಡುವುದಿಲ್ಲ ನಿರಂತರ ಹೋರಾಟ ನಡೆಯುತ್ತದೆ ಎಂದರು. ಪ್ರತಿಭಟನೆಯಲ್ಲಿ ತಾಲ್ಲೂಕು ಪಂಚಾಯಿತಿ ಸದಸ್ಯ ನಟೇಶ, ಬಿಜಿಪುರ ಹಲವಾರನಾಲಾ ರೈತ ಹಿತಾರಕ್ಷಣಾ ಸಮಿತಿ ಅಧ್ಯಕ್ಷ ನಟರಾಜು, ಬನ್ನೂರುನಾರಾಯಣ, ಆನಂದ್, ಸತೀಸ್, ವಸಂತ, ಕ್ಯಾತನಹಳ್ಳಿಅಶೋಕ, ನಂಜಮ್ಮ, ಮಾದೇಶ, ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here