ಕ್ರೀಡಾಕೂಟ ಸಮಾರಂಭ

0
110

ಮಂಡ್ಯ/ಮಳವಳ್ಳಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ವತಿಯಿಂದ 2017 – 18 ಸಾಲಿನ ಕಸಬಾ ಹೋಬಳಿ ಮಟ್ಟದ ಬಾಲಕ ಬಾಲಕಿಯರು ಕ್ರೀಡಾಕೂಟ ಸಮಾರಂಭ ಮಳವಳ್ಳಿ ಪಟ್ಟಣದಲ್ಲಿ ನಡೆಯಿತು ಪಟ್ಟಣದ ಭಕ್ತ ಕನಕದಾಸ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಮಾಧು ಉದ್ಘಾಟಿಸಿ ಮಾತನಾಡಿ ಮಕ್ಕಳು ತಮ್ಮ ತಮ್ಮ ಅಂಗಾಂಗಗಳು ಆರೋಗ್ಯ ವಾಗಿ ಇರಬೇಕಾದರೆ ಕ್ರೀಡೆ ಮುಖ್ಯ ಪ್ರತಿಯೊಬ್ಬ ಕ್ರೀಡೆಯನ್ನು ಮೈಗೂಡಿಸಿಕೊಳ್ಳಬೇಕು ಎಂದರು . ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಪಾಟೀಲ್ ಮಾತನಾಡಿ , ಶಿಕ್ಷಕರು ಮಕ್ಕಳಲ್ಲಿ ಶಿಸ್ತು ಕಲಿಸಬೇಕು.ಜೊತೆ ಗೆ ಕ್ರೀಡಾ ಚಟುವಟಿಕೆ ಗಳ ಬಗ್ಗೆ ಗಮನಹರಿಸಿ ಸೋಲು ಗೆಲುವಿನ ಸೋಪಾನ ಎಂದು ಮಕ್ಕಳು ತಿಳಿದುಕೊಳ್ಳಬೇಕು ಎಂದರು. ಕಾರ್ಯಕ್ರಮ ದಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಹೇಶ. ಕ್ಷೇತ್ರ ಸಂಪನ್ಮೂಲ ಅಧಿಕಾರಿ ಯೋಗೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್, ದೈಹಿಕ ಶಿಕ್ಷಕ ಸಂಘದ ಅದ್ಯಕ್ಷ ನಿಂಗರಾಜು ಸೇರಿದಂತೆ ಮತ್ತಿತ್ತರರು ಇದ್ದರು

LEAVE A REPLY

Please enter your comment!
Please enter your name here