ಅವಹೇಳನಕಾರಿ ಹೇಳಿಕೆ ಖಂಡಿಸಿ ಮುಸ್ಲಿಂ ಭಾಂದವರಿಂದ ಪ್ರತಿಭಟನೆ

0
451

ಚಿಕ್ಕಬಳ್ಳಾಪುರ/ಚಿಂತಾಮಣಿ:- ಗುಜರಾತ್ ನ ಮಹಿಳೆಯೊಬ್ಬಳು ಪ್ರವಾದಿ ಮುಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಾ ಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ ಚಿಂತಾಮಣಿ ಯಲ್ಲಿ ಮುಸ್ಲಿಂ ಭಾಂದವರು ಜಾಮೀಯಾ ಮಸೀದಿ ಕಮೀಟಿಯ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮಾಡಿ ತಹಶಿಲ್ದಾರ್ ರವರ ಮೂಲಕ ರಾಷ್ಟ್ರಪತಿ ರವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.

ಗುಜರಾತ್ ನ ಸೋನು ಡಂಗ್ಗರ್ ಎಂಬ ಮಹಿಳೆ ಪ್ರವಾದಿ ಮೊಹಮ್ಮದ್ ಪೈಗಂಬರ್ ರವರ ಬಗ್ಗೆ ಅವಹೇಳನ ಕಾರಿಯಾಗಿ ಮಾತನಾಡಿ ವಾಟ್ಸಾಪ್ ಹಾಗೂ ಪೇಸ್ ಬುಕ್ ಗಳಲ್ಲಿ ಅಪ್ ಲೋಡ್ ಮಾಡಿರುವುದನ್ನು ಖಂಡಿಸಿ ಈಕೆಯನ್ನು ಕೂಡಲೇ ಬಂಧಿಸಿ ಉಗ್ರ ಶಿಕ್ಷೆ ನೀಡುವಂತೆ ಒತ್ತಾಯಿಸಿ ಜಾಮೀಯಾ ಮಸೀದಿ ಕಮಿಟಿ ನೇತೃತ್ವದಲ್ಲಿ ಸಾವಿರಾರು ಮುಸ್ಲಿಂ ಭಾಂದವರು ನಗರದ ಆಜಾದ್ ಚೌಕ ದಿಂದ ಪ್ರತಿಭಟನಾ ಜಾಥಾ ಆರಂಭಿಸಿ ನಗರದ ಮುಖ್ಯ ರಸ್ತೆ ಗಳಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಸೋನು ಡಂಗ್ಗರ್ ರವರ ವಿರುದ್ಧ ದಿಕ್ಕಾರಗಳನ್ನು ಕೂಗಿ ಬೆಂಗಳೂರು ವೃತ್ತದಲ್ಲಿ ಸೋನು ಡಂಗ್ಗರ್ ರವರ ಪ್ರತಿಕೃತಿ ಯನ್ನು ಧಹಿಸಿ ನಂತರ ತಾಲ್ಲೂಕು ಕಛೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನ ಕಾರಿಯಾಗಿ ಮಾತನಾಡಿರುವವರ ವಿರುದ್ಧ ಕಾನೂನು ರೀತಿ ಸೂಕ್ತ ಕ್ರಮ ಜರಗಿಸುವಂತೆ ಆಗ್ರಹಿಸಿ ರಾಷ್ಟ್ರಪತಿ ಹಾಗೂ ಪ್ರಧಾನಿ ಮಂತ್ರಿಗಳಿಗೆ ತಹಶಿಲ್ದಾರ್ ಅಜಿತ್ ಕುಮಾರ್ ರೈ ರವರ ಮುಖಾಂತರ ಮನವಿ ಪತ್ರವನ್ನು ಸಲ್ಲಿಸಿದರು.
ಮುಸ್ಲಿಂ ಸಮುದಾಯದವರು ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮೆರವಣಿಗೆಯಿಂದಾಗಿ ನಗರದ ಮುಖ್ಯ ವೃತ್ತಗಳಲ್ಲಿ ಮಾನವ ಸರಪಳಿ ನಿರ್ಮಾಣ ಮಾಡಿ ಪ್ರತಿಕೃತಿ ದಹಿಸಿ ವಾಹನ ಸಂಚಾರ ತಡೆದ ಪರಿಣಾಮ ನಗರದಲ್ಲಿ ಸುಮಾರು 2 ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡು ವಾಹನ ಸವಾರರು ಪರದಾಡುವಂತಾಯಿತು.ಯಾವುದೇ ಅಹಿತಕರ ಘಟನೆಗಳು ನಡೆಯದೇ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು

ಈ ಸಂದರ್ಭದಲ್ಲಿ ಚಿಂತಾಮಣಿ ಯ ಎಲ್ಲಾ ಮುಸ್ಲಿಂಭಾಂದವರು ಹಾಗೂ ಜಾಮೀಯಾ ಕಮೀಟಿಯ ಎಲ್ಲಾ ಪದಾಧಿಕಾರಿಗಳು ಮತಿತ್ತರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here