ಸರ್ಕಾರಿ ಆಸ್ಪತ್ರೆಯ ಮುಂದೆ ಪ್ರತಿಭಟನೆ

0
82

 

ಯಾದಗಿರಿ/ಯಲಬುರ್ಗಾ: ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯಿಂದ ಸರಿಯಾದ ಚಿಕಿತ್ಸೆ ಕೊಡಲಾರದಕಾರಣ ದಿನಾಂಕ 28 ರಂದು ರೋಗಿ ಯಮನೂರಪ್ಪ ತಂದಿ ದುರಗಪ್ಪಛಲವಾದಿ( 45 ) ಅನಾರೋಗ್ಯ ಕಾರಣ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲು. ಸೂಕ್ತ ರೀತಿಯಲ್ಲಿ ಚಿಕಿತ್ಸೆ ಸಿಗದಕಾರಣ ಇಂದು ಆತನು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ, ವೈದ್ಯರ ನಿರ್ಲಕ್ಷ್ಯ ಖಂಡಿಸಿ ಮಂಗಳೂರು ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿ ಪ್ರತಿಭಟನೆ.

ತಾಲ್ಲೂಕಿನ ಬಿಜೆಪಿ ಯುವ ಮುಖಂಡ ನವೀನ ಕುಮಾರ್ ಗಳಗಣ್ಣನವರ ಇಡೀ ತಾಲ್ಲೂಕಿನಲ್ಲಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇದ್ದರೂ ಸರ್ಕಾರ ಕಣ್ಣು ಮುಚ್ಚಿ ಕೊಂಡಿದೆಯಾ ನಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು ಬಸವರಾಜ ರಾಯರಡ್ಡಿವರು ನನ್ನ ತಾಲ್ಲೂಕು ಅಭಿವೃದ್ಧಿಯಾಗಿದೆ ಅಭಿವೃದ್ಧಿ ಯಾಗಿದೆ ಎಂದು ಬೊಬ್ಬೆ ಹೊಡೆಯುವ ಸಚಿವರೇ ಮೊದಲು ತಾಲ್ಲೂಕಿನ ಆಸ್ಪತ್ರೆಗಳಿಗೆ ವೈದ್ಯರ ಕೊಡಿಸಿ ಸ್ವಾಮಿ ಬರಗಾಲ ಪೀಡಿತ ಪ್ರದೇಶ ಎಂದು ಘೋಷಣೆ ಮಾಡದರೆ ಸಾಲದು, ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು ಮತ್ತು ಸರಿಯಾಗಿ ಚಿಕಿತ್ಸೆ ನೀಡದಿದ್ದ ವೈದ್ಯರನ್ನು ಸೇವೆಯಿಂದ ವಜಾ ಮಾಡಬೇಕು ಮತ್ತು ಮೃತನ ಕುಟುಂಬ ಸದಸ್ಯರಿಗೆ ಪರಿಹಾರ ಕೊಡಬೇಕು ಎಂದು ಆಗ್ರಹಿಸಿದರು.

LEAVE A REPLY

Please enter your comment!
Please enter your name here