ಸಾಲ ಮನ್ನಾ ಮಾಡುವಂತೆ ಒತ್ತಾಯ

0
155

ಬಳ್ಳಾರಿ/ಹೊಸಪೇಟೆ: ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ತಾಲೂಕಿನ ವಿವಿಧ ಗ್ರಾಮಗಳ ರೈತರು ಉಪ ವಿಭಾಗಾಧಿಕಾರಿ ಪ್ರಶಾಂತ್ ಕುಮಾರ ಮಿಶ್ರಾ ಅವರಿಗೆ ಮನವಿ ಸಲ್ಲಿಸಿದರು. ಅಂಬೇಡ್ಕರ್ ವೃತ್ತದಿಂದ ಪಾದಯಾತ್ರೆ ಮೂಲಕ ಉಪ ವಿಭಾಗಾಧಿಕಾರಿ ಕಚೇರಿ ಆವರಣದಲ್ಲಿ ಜಮಾಯಿಸಿದ ನೂರಾರು ರೈತರು, ಸತತ ನಾಲ್ಕು ವರ್ಷಗಳಿಂದ ಮಳೆಯಿಲ್ಲದೇ ತೀವ್ರ ಬರಗಾಲ ಎದುರಾಗಿದ್ದು, ರೈತರು ಮಾಡಿದ ಎಲ್ಲಾ ಸಾಲ ಮನ್ನಾ ಮಾಡುವಂತೆ ಮುಖ್ಯಮಂತ್ರಿ ಹಾಗೂ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದರು. ರಾಜ್ಯ ಭೀಕರ ಬರಗಾಲದಿಂದ ತತ್ತರಿಸಿದ್ದು ಜನ ಜಾನುವಾರು ಮೇವು ನೀರಿಲ್ಲದೇ ಸಾವನ್ನಪ್ಪುತ್ತಿವೆ. ಸಕಾಲಕ್ಕೆ ಮಳೆಯಾಗದೆ ಜಲಾಶಯಗಳು ಒಣಗಿ ಬಡವಾಗಿವೆ. ರೈತ ಬೆಳೆದ ಬೆಳೆ ನೀರಿಲ್ಲದೆ ಸೊರಗಿ ಬೆಳೆನಾಶವಾಗಿದೆ. ಸಾಲಬಾಧೆ ತಾಳಲಾರದೆ ರೈತ ಕುಟುಂಬಗಳು ಆತ್ಮಹತ್ಯೆಯ ದಾರಿ ಹಿಡಿದಿದ್ದು, ದೇಶಕ್ಕೆ ಅನ್ನ ನೀಡುವ ರೈತನ ಪರಿಸ್ಥಿತಿ ಶೋಚನೀಯ ಸ್ಥಿತಿಗೆ ತಲುಪಿದೆ. ಕೂಡಲೇ ಎರಡು ಸರ್ಕಾರಗಳು ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.ಮುಖಂಡರಾದ ಕೆ.ಪರಶುರಾಮ, ಜೆಎನ್.ಕಾಳಿದಾಸ್, ಎಂ.ಪ್ರಕಾಶ್,ಎನ್.ವೆಂಕಟೇಶ್, ಬಿ.ಗಂಗಾಧರ, ಬಿ.ಬಸಯ್ಯ, ಎಂ.ಸಿದ್ದಲಿಂಗೇಶ್ವರ, ಸಿ.ಸೋಮಪ್ಪ, ಹೊನ್ನೂರಪ್ಪ ಇತರರು ಇದ್ದರು.

LEAVE A REPLY

Please enter your comment!
Please enter your name here