ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

0
59

ಚಿಕ್ಕಬಳ್ಳಾಪುರ/ಶಿಡ್ಲಘಟ್ಟ: ಗ್ರಾಮೀಣ ಪ್ರದೇಶದಲ್ಲಿ ಕ್ರಿಕೆಟ್ ನಂತಹ ಜನಪ್ರಿಯ ಕ್ರೀಡೆಗಳನ್ನು ಆಯೋಜಿಸುವ ಮೂಲಕ ಗ್ರಾಮಾಂತರ ಜನತೆಗೆ ಸಹ ಪಾಲ್ಗೋಳ್ಳಲು ಅವಕಾಶ ಕಲ್ಪಿಸಿದಲ್ಲಿ ಅತ್ಯುತ್ತಮ ಕ್ರೀಡಾ ಪಟುಗಳು ಹೊರ ಹೊಮ್ಮಲು ಸಾಧ್ಯವಿದೆ ಎಂದು ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ  ಮಾಜಿ ಜಿಲ್ಲಾ ಪಂಚಾಯಿತ್ ಸದಸ್ಯ ಆರ್ .ಶ್ರೀನಿವಾಸ್  ಅಭಿಪ್ರಾಯ ಪಟ್ಟರು.

ತಾಲೂಕಿನ  ಅಲಸೂರು ದಿನ್ನೆ ಶ್ರೀ ವೇಣುಗೋಪಾಲ ಸ್ವಾಮಿ ಯುವಕರ ಬಳಗದ ವತಿಯಿಂದ  ಆಯೋಜಿಸಿದ್ದ ಗ್ರಾಮಾಂತರ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು ಗ್ರಾಮೀಣ ಆಟಗಳಲ್ಲಿ ಕೇವಲ ಕ್ರಿಕೆಟ್‌ಗೆ ಸಿಮೀತವಾಗದೆ ಇತರೆ ಗ್ರಾಮೀಣ ಆಟಗಳನ್ನು ಆಡುವ ಮೂಲಕ ಪ್ರತಿಭೆಗಳು ಹೊರ ಹೊಮ್ಮಬೇಕು. ಗ್ರಾಮೀಣ ಪ್ರದೇಶದಲ್ಲಿ ಕ್ರಿಕೆಟ್ ಕ್ರೀಡಾಕೂಟ ಆಯೋಜಿಸಿರುವುದು ಶ್ಲಾಘನೀಯವಾಗಿದ್ದು, ಸುತ್ತಮುತ್ತಲ ಹಳ್ಳಿಗಳಿಂದ ಬಂದ ಆಟಗಾರರಿಗೆ  ಗ್ರಾಮಾಂತರ ಕ್ರೀಡಾ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಒದಗಿಸಿರುವುದು ಮಾದರಿಯ ಕಾರ್ಯವಾಗಿದೆ ಎಂದು ಹರ್ಷ ವ್ಯಕ್ತ ಪಡಿಸಿದರು.

ಕಾಯ೯ಕ್ರಮದಲ್ಲಿ ಆನೂರು ಎಸ್.ಎನ್. ಕ್ರಿಯಾಟ್ರಸ್ಟ್ ನ ಅಧ್ಯಕ್ಷ ಆಂಜಿನಪ್ಪ ಪುಟ್ಟ , ಜಂಗಮಶೀಗೆಹಳ್ಳಿ ದೇವರಾಜ್,  ಮುನಿರಾಜ್, ಆಂಜಿ, ಸೇರಿದಂತೆ ಮುಂತಾದವರು ಭಾಗವಹಿಸಿದ್ದರು

LEAVE A REPLY

Please enter your comment!
Please enter your name here