ಮನೆಜಿಲ್ಲೆ ಸುದ್ದಿಕೇಂದ್ರ ಪುರಸ್ಕೃತ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸಿ: ಸಂಸದ ಡಾ. ಕೆ. ಸುಧಾಕರ್

ಕೇಂದ್ರ ಪುರಸ್ಕೃತ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸಿ: ಸಂಸದ ಡಾ. ಕೆ. ಸುಧಾಕರ್

ಬೆಂ.ಗ್ರಾ.ಜಿಲ್ಲೆ: ಕೇಂದ್ರ ಸರಕಾರದ ಜನಪರ ಯೋಜನೆ ಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಚಿಕ್ಕಬಳ್ಳಾಪುರ ಲೋಕಸಭಾ ಸಂಸದ ಡಾ.ಕೆ ಸುಧಾಕರ್  ಸೂಚನೆ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ದಿಶಾ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿ ಅವರು ಮಾತನಾಡಿದರು. ಕೇಂದ್ರ ಸರಕಾರವೂ ಆಯುಷ್ಮಾನ ಭಾರತ,ಕಿಸಾನ್ ಸಮ್ಮಾನ್, ವಿಶ್ವಕರ್ಮ, ಪಿಎಂಇಜಿಪಿ ಯೋಜನೆ ಯಂತಹ ಸಾಕಷ್ಟು ಜನರ ಪರ ಯೋಜನೆಗಳನ್ನು ತಂದಿದ್ದು, ಅದರ ಸೌಲಭ್ಯಗಳು ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು.

ರೈತರಲ್ಲಿ ಫಸಲ್ ಭೀಮಾ ಯೋಜನೆ ಅರಿವು ಮೂಡಿಸಿ: ಜಿಲ್ಲೆಯಲ್ಲಿ 1.92 ಲಕ್ಷ ರೈತರು ಇದ್ದು, ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಕಳೆದ ವರ್ಷ ಕೇವಲ 6053 ರೈತರು ನೋಂದಾಯಿಸಿ ಕೊಂಡಿದ್ದಾರೆ. ನೋಂದಾಯಿತ ರೈತರ ಸಂಖ್ಯೆಯಲ್ಲಿ ತೀರಾ ಕಡಿಮೆಯಾಗಿದ್ದು, ಜಿಲ್ಲೆಯ ರೈತರಲ್ಲಿ ಯೋಜನೆ ಕುರಿತಾಗಿ ವ್ಯಾಪಕ ಅರಿವು ಮೂಡಿಸುವ ಕಾರ್ಯಕ್ಕೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮುಂದಾಗ ಬೇಕು ಎಂದು ಸೂಚಿಸಿದರು.

ವಿಮೆ ಕಟ್ಟಿರುವವರಿಗೆ ಸಾಕಷ್ಟು ಈಗಾಗಲೇ ಅನುಕೂಲ ವಾಗಿದೆ. ರೈತರಿಗೆ ನಂಬಿಕೆ ಇಲ್ಲದ ಕಾರಣ ವಿಮೆ ಕಟ್ಟಿಲ್ಲ. ಇದರ ಬಗ್ಗೆ ಅರಿವು ಮೂಡಿಸಬೇಕು. ವಿಶೇಷ ಅಭಿಯಾನದ ಮೂಲಕ ಜನರಿಗೆ ಈ ಯೋಜನೆ  ಬಗ್ಗೆ ಮಾಹಿತಿ ನೀಡಬೇಕು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈಗಾಗಲೇ ಸಾಕಷ್ಟು ಜಮೀನುಗಳನ್ನು ಕೆಐಎಡಿಬಿ ವಶಪಡಿಸಿಕೊಂಡಿದ್ದಾರೆ. ಇದರಿಂದ ಫಲಾನುಭವಿಗಳಿಗೆ ವಿಮೆ ಸೌಲಭ್ಯ ತಲುಪಿ ದಾಗ ಅದರ ಬಗ್ಗೆ ಕಾರ್ಯಕ್ರಮ ಮಾಡಿ ರೈತರಿಗೆ ಅರಿವು ಮೂಡಿಸಬೇಕು ಎಂದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -

Most Popular

Recent Comments