ಮನೆಜಿಲ್ಲೆ ಸುದ್ದಿಸಾಸಲು ಚಿನ್ನಮ್ಮ ಉತ್ಸವಕ್ಕೆ ಸಿದ್ದತೆ.

ಸಾಸಲು ಚಿನ್ನಮ್ಮ ಉತ್ಸವಕ್ಕೆ ಸಿದ್ದತೆ.

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು ಹೋಬಳಿ‌‌ ಕೇಂದ್ರದ ಡಾ.ಬಿ.ಆರ್. ಅಂಬೇಡ್ಕರ್ ಪ್ರೌಢಶಾಲಾ ಆವರಣದಲ್ಲಿ ಏ.19 ರಂದು ಭಾನುವಾರ ಸಾಸಲು ಚಿನ್ನಮ್ಮ ಉತ್ಸವ ನಡೆಯಲಿದೆ. ಸಾಸಲು ಹೋಬಳಿ‌ ಚಿನ್ನಮ್ಮ ಉತ್ಸವ ಸಮಿತಿ ವತಿಯಿಂದ ಮೊದಲ ಬಾರಿಗೆ ನಡೆಯುತ್ತಿರುವ ಸಾಸಲು ಚಿನ್ನಮ್ಮ ಉತ್ಸವ-2026 ಕಾರ್ಯಕ್ರಮವನ್ನು ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಡಾ.ಡಿ.ಕೆ.ಚಿತ್ತಯ್ಯ ಪೂಜಾರ್ ಉದ್ಘಾಟಿಸಲಿದ್ದಾರೆ ಎಂದು ತಾ.ಪಂ ಮಾಜಿ ಅಧ್ಯಕ್ಷ ಲಾವಣ್ಯ ನಾಗರಾಜ್ ತಿಳಿಸಿದರು.
ಅವರು ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದರು. ಸಾಸಲು ಚಿನ್ನಮ್ಮ ಉತ್ಸವ ಏ.19ರ ಬೆಳಗ್ಗೆ 8 ಗಂಟೆಗೆ ಸಾದ್ವಿಮಣಿ ಸಾಸಲು ಚಿನ್ನಮ್ಮ ದೇವಾಲಯ ಮುಂಭಾಗ ದಿಂದ ಅಂಬೇಡ್ಕರ್ ಪ್ರೌಢಶಾಲೆಯ ಸಾಸಲು ಚೆನ್ನಮ್ಮ ಉತ್ಸವ ವೇದಿಕೆ ತನಕ ಜಾನಪದ ಕಲಾ ತಂಡಗಳೊಂದಿಗೆ ಸಾಸಲು ಚಿನ್ನಮ್ಮ ಮೂರ್ತಿಯನ್ನು ಚಿಲಕಲ ಬಂಡಿ ಮೂಲಕ ಮೆರವಣಿಗೆ ನಡೆಯುತ್ತದೆ ಎಂದರು.ಸಾಸಲು ಚಿನ್ನಮ್ಮ ಉತ್ಸವದ ಮುಖ್ಯ ವೇದಿಕೆ ಯಲ್ಲಿಬಜಾನಪದ ವಿದ್ವಾಂಸರಾದ ಸಣ್ಣ ನಾಗಪ್ಪನವರಿಂದ ಸಾಸಲು ಚಿನ್ನಮ್ಮ ಪರಿಚಯದ ಕಿರುಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಧೀರಾಜ್ ಮುನಿರಾಜು, ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಕಿಮ್ಸ್ ಆಸ್ಪತ್ರೆ ಮಾಜಿ ಅಧ್ಯಕ್ಷ ಬಿ.ಮುನೇಗೌಡ ಭಾಗವಹಿಸುವರು. ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಅಧ್ಯಕ್ಷತೆ ವಹಿಸಲಿದ್ದಾರೆ. ಮಧ್ಯಾಹ್ನ 12 ಗಂಟೆ ಯಿಂದ ಸಾಂಸ್ಕೃತಿಕ ಕಾರ್ಯಕ್ರಮ‌ ಗಳನ್ನು ಆಯೋಜನೆಮಾಡಲಾಗಿರುತ್ತದೆ. ಸಾಸಲು ಹೋಬಳಿ ಕುರಿತು ಚಿಂತನ-ಮಂಥನ ವಿಚಾರಗೋಷ್ಠಿ ,ರಾತ್ರಿ 7 ಗಂಟೆಗೆ ಸಾಸಲು ಚೆನ್ನಮ್ಮ ಕುರಿತ ನಾಟಕ ನಡೆಯಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ್, ಸಾಸಲು ಹೋಬಳಿ ಕಸಾಪ ಘಟಕದ ಅಧ್ಯಕ್ಷ ಜಿ.ಎಂ.ನಾಗರಾಜು,ಸಾಸಲು ಚಿನ್ನಮ್ಮ ಉತ್ಸವ ಸಮಿತಿಯ ಸದಸ್ಮುಯರುಗಳಾದ ವಕೀಲರಾದ ನರಸಿಂಹಗೌಡ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ಗ್ರಾಮಪಂಚಾಯ್ತಿ ಸದಸ್ಯ ಪಚ್ಚಾರಹಳ್ಳಿ ರಮೇಶ್,ಉಪನ್ಯಾಸಕ ಕೇಶವಮೂರ್ತಿ, ಚಂದ್ರಶೇಖರ್ ಮುಂತಾದವರು ಉಪಸ್ಥಿತರಿದ್ದರು
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -

Most Popular

Recent Comments