ತುಲಾಭಾರ ಸೇವೆ ನೆರವೇರಿಸಿ ಹರಕೆ ತೀರಿಸಿದ ಕುಮಾರಸ್ವಾಮಿ*

0
12

*ನಂಜನಗೂಡಿನ ನಂಜುಂಡೇಶ್ವರನ ದರ್ಶನ ಪಡೆದ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹೆಚ್. ಡಿ ಕುಮಾರಸ್ವಾಮಿ*

*ತುಲ ಭಾರ ಸೇವೆ ನೆರವೇರಿಸಿ ಹರಕೆ ತೀರಿಸಿದ ಕುಮಾರಸ್ವಾಮಿ*

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಇಂದು ಗುರುವಾರ ಬೆಳಿಗ್ಗೆ 9 ಗಂಟೆಯ ಸಮಯದಲ್ಲಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವುದರ ಜೊತೆಗೆ ದೇವರ ದರ್ಶನ ಪಡೆದುಕೊಂಡರು.

ಪ್ರತಿ ಚುನಾವಣೆಯ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ವರಿಷ್ಠ ಹೆಚ್.ಡಿ ದೇವೇಗೌಡ ಸೇರಿದಂತೆ ಇಡೀ ಕುಟುಂಬ ನಾಮಪತ್ರ ಸಲ್ಲಿಸುವ ಮುನ್ನ ನಂಜನ ಗೂಡು ನಂಜುಂಡೇಶ್ವರನ ದೇವಾಲಯಕ್ಕೆ ಬಂದು ದೇವರ ದರ್ಶನ ಮಾಡಿ ಪ್ರಸಾದ ಪಡೆದ ಬಳಿಕ ಚುನಾವಣಾ ಪ್ರಚಾರದಲ್ಲಿ ಕೈಗೊಳ್ಳುವುದು ಸಾಕಷ್ಟು ವರ್ಷಗಳ ನಂಬಿಕೆಯಾಗಿದೆ.
ಇಂದು ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರ ಜೊತೆಗೂಡಿ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ನಂಜುಂಡೇಶ್ವರನ ವರ ಪಡೆದು ಲೋಕಸಭಾ ಚುನಾವಣೆಯ ಗೆಲುವಿಗಾಗಿ ಹರಕೆ ಹೊತ್ತು ಹೊರ ನಡೆದಿದ್ದಾರೆ.
ಹೆಚ್.ಡಿ ಕುಮಾರಸ್ವಾಮಿಗೆ ಆರೋಗ್ಯ ಕ್ಷೀಣಿಸಿದ ಕಾರಣ ದೇವಾಲಯಕ್ಕೆ ಬಂದು ಜನರ ಸೇವೆಗೆ ಅವಕಾಶ ಕಲ್ಪಿಸಿದರೆ ತುಲ ಭಾರ ನೆರವೇರಿಸುತ್ತೇನೆ ಎಂದು ನಂಜುಂಡನಿಗೆ ಹರಕೆ ಒತ್ತಿದ್ದರು. ಅದರಂತೆ ಪಾರ್ವತಮ್ಮ, ಚಂಡಿಕೇಶ್ವರ, ಗಣಪತಿ, ಸುಬ್ರಮಣ್ಯ ದೇವರ ದರ್ಶನ ಪಡೆದು, ತುಲ ಭಾರವನ್ನು ನೆರವೇರಿಸಿ ತಮ್ಮ ಹರಕೆಯನ್ನು ತೀರಿಸಿದ್ದಾರೆ.
ಈ ವೇಳೆ ಶಾಸಕ ಜಿಟಿ ದೇವೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ನರಸಿಂಹಮೂರ್ತಿ ಸೇರಿದಂತೆ ಹಲವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here